ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಗೆ ಅಂಗನವಾಡಿ ಸ್ಥಳಾಂತರಕ್ಕೆ ಶಿಫಾರಸು

Last Updated 12 ಡಿಸೆಂಬರ್ 2018, 20:00 IST
ಅಕ್ಷರ ಗಾತ್ರ

ಬೆಳಗಾವಿ:ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಶಾಲೆಗಳಲ್ಲಿ ಲಭ್ಯವಿರುವ ಕೊಠಡಿಗಳಿಗೆ ಕಡ್ಡಾಯವಾಗಿ ಸ್ಥಳಾಂತರಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ.

ಶಾಸಕ ಎಸ್.ಟಿ. ಸೋಮಶೇಖರ್ ನೇತೃತ್ವದ ಸಮಿತಿ ವಿಧಾನಸಭೆಯಲ್ಲಿ ಬುಧವಾರ ವರದಿ ಮಂಡಿಸಿತು.

ಸಮಿತಿಯ ಪ್ರಮುಖ ಶಿಫಾರಸುಗಳು:

*ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಮುಂದಿನ ಆರ್ಥಿಕ ವರ್ಷದಲ್ಲಿ ವೇತನ ಹೆಚ್ಚಳ ಮಾಡಬೇಕು.

*ತಾಲ್ಲೂಕುವಾರು ತರಬೇತಿ ಶಿಬಿರ ನಡೆಸಬೇಕು.

*ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಪ್ರಮಾಣವನ್ನು ಕಡ್ಡಾಯ
ವಾಗಿ ಪರಿಶೀಲಿಸಿ ಅಂಗನವಾಡಿ ಕೇಂದ್ರಗಳಿಗೆ ಖರೀದಿ ಮಾಡಬೇಕು.

*ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೀಡುತ್ತಿರುವ ಚಿಕಿತ್ಸಾ ವೆಚ್ಚದಲ್ಲಿ ಉದಾಸೀನ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು.

*ಅಂಗನವಾಡಿ ಮಕ್ಕಳಿಗೆ ಅನುಕೂಲವಾಗುವಂತೆ ಇಲಾಖೆಯಿಂದ ಆ್ಯಪ್ ಅಳವಡಿಸಲು ಹಾಗೂ ವೀಲ್‌ಚೇರ್‌ ಒದಗಿಸಲು ಕ್ರಮ ಕೈಗೊಳ್ಳಬೇಕು.

*ಅಂಗನವಾಡಿ ಸಹಾಯಕಿಯರ ನೇಮಕಾತಿಯಲ್ಲಿ ಸ್ಥಳೀಯ ಭಾಷೆ ತಿಳಿದವರಿಗೆ ಆದ್ಯತೆ ಕೊಡಬೇಕು.

*ಕಾರ್ಯಕರ್ತೆಯರು, ಸಹಾಯಕಿಯರಿಗೆ ಸೂಕ್ತ ವೈದ್ಯಕೀಯ ರಜೆ ಸೌಲಭ್ಯ ಕಲ್ಪಿಸಲು ನಿಯಮ ರಚಿಸಬೇಕು.

*ಅಂಧ ಮಹಿಳೆಯರಿಗೆ ಜನಿಸುವ ಮಕ್ಕಳ ಪಾಲನೆಗೆ ಎರಡು ವರ್ಷಗಳವರೆಗೆ ಮಾಸಿಕ ₹ 2000 ನೀಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT