ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ?

ಮಂಗಳವಾರ, ಜೂನ್ 18, 2019
31 °C

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ?

Published:
Updated:

ಬೆಂಗಳೂರು: ರಾಜ್ಯದ ಖಡಕ್ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ತೀರ್ಮಾನಿಸಿರುವುದಾಗಿ ಮೂಲಗಳು ತಿಳಿಸಿವೆ.

‘ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿ ಆಗಿ ಕೆಲಸ ಮಾಡುತ್ತಿರುವ ಅಣ್ಣಾಮಲೈ ಅವರು ಸದ್ಯದಲ್ಲೇ ಗೃಹ ಇಲಾಖೆಯ ಕಾರ್ಯದರ್ಶಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ’ ಎಂದು ಅವರ ಆಪ್ತ ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ. 

‘ಚಿಕ್ಕಮಗಳೂರು ಎಸ್ಪಿ ಆಗಿದ್ದ ಅವರನ್ನು 2018ರ ಅಕ್ಟೋಬರ್‌ನಲ್ಲಿ ಬೆಂಗಳೂರಿಗೆ ವರ್ಗಾಯಿಸಲಾಗಿತ್ತು. ಅಧಿಕಾರ ವಹಿಸಿಕೊಂಡ ನಂತರ ಹಲವು ಕಾರ್ಯಾಚರಣೆ ಮೂಲಕ ಅಪರಾಧಗಳನ್ನು ನಿಯಂತ್ರಿಸಿದ್ದರು. ಇತ್ತೀಚಿನ ಕೆಲ ಬದಲಾವಣೆಗಳಿಂದ ಬೇಸರಗೊಂಡಿರುವ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.

ರಾಜಕೀಯಕ್ಕೆ ಪ್ರವೇಶ: ‘ಹುದ್ದೆಗೆ ರಾಜೀನಾಮೆ ನೀಡುವ ಸಂಬಂಧ ಕಳೆದ ಆರು ತಿಂಗಳಿನಿಂದಲೇ ಅಣ್ಣಾಮಲೈ ಅವರು ಚಿಂತನೆ ನಡೆಸುತ್ತಿದ್ದರು. ರಾಜೀನಾಮೆ ನೀಡಿದ ಬಳಿಕ ರಾಜಕೀಯಕ್ಕೆ ಪ್ರವೇಶಿಸುವ ಬಗ್ಗೆಯೂ ಯೋಚಿಸುತ್ತಿದ್ದಾರೆ. ಈಗಾಗಲೇ ತಮಿಳುನಾಡಿನ ಕೆಲ ರಾಜಕೀಯ ಮುಖಂಡರನ್ನು ಭೇಟಿಯಾಗಿ ಮಾತುಕತೆಯನ್ನೂ ನಡೆಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 35

  Happy
 • 9

  Amused
 • 46

  Sad
 • 14

  Frustrated
 • 41

  Angry

Comments:

0 comments

Write the first review for this !