4

ಬಜೆಟ್ ಮಂಡನೆ: ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸಿ

Published:
Updated:

ಯಾದಗಿರಿ:‘ಸಮ್ಮಿಶ್ರ ಸರ್ಕಾರ ಮಂಡಿಸಲಿರುವ ಬಜೆಟ್ ನಲ್ಲಿ ಹಿಂದುಳಿದ ಯಾದಗಿರಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸಿ ಅಭಿವೃದ್ಧಿಪಡಿಸಬೇಕು’ ಎಂದು ಕೋಲಿ ಸಮಾಜದ ಜಿಲ್ಲಾ ಅಧ್ಯಕ್ಷ ಉಮೇಶ ಕೆ. ಮುದ್ನಾಳ ಆಗ್ರಹಿಸಿದ್ದಾರೆ. 

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಜಿಲ್ಲೆ ಕಡೆಯ ಸ್ಥಾನದಲ್ಲಿದೆ. ಶೈಕ್ಷಣಿಕವಾಗಿಯೂ ಜಿಲ್ಲೆ ತೀರಾ ಹಿಂದುಳಿದಿದೆ. ಆದ್ದರಿಂದ, ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡಬೇಕು. ‘ದೇಶದಲ್ಲಿ ಹಿಂದುಳಿದ 115 ಜಿಲ್ಲೆಗಳಲ್ಲಿ ರಾಜ್ಯದ ಯಾದಗಿರಿ ಜಿಲ್ಲೆಯೂ ಒಂದಾಗಿದೆ. ಕೇಂದ್ರ ಸರ್ಕಾರ ಯಾದಗಿರಿ ಜಿಲ್ಲೆಯನ್ನು ಮಹಾತ್ವಾಕಾಂಕ್ಷಿ ಜಿಲ್ಲೆಯನ್ನಾಗಿ ಗುರುತಿಸಿದ್ದು, ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಂದಾಗಿದೆ. ರಾಜ್ಯ ಸರ್ಕಾರ ಕೂಡ ವಿಶೇಷ ಕಾಳಜಿ ವಹಿಸುವ ಮೂಲಕ ಕೈಜೋಡಿಸಬೇಕು’ ಎಂದಿದ್ದಾರೆ ಮುದ್ನಾಳ.

‘ಜಿಲ್ಲೆಯಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಭ್ರಷ್ಟಾಚಾರದಲ್ಲಿ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನ ಪಡೆಯಲಿದೆ. ಭ್ರಷ್ಟಾಚಾರ ಮುಕ್ತ ಜಿಲ್ಲೆಯನ್ನಾಗಿಸಲು ಜನಪ್ರತಿನಿಧಿಗಳು ಪ್ರಯತ್ನಿಸಬೇಕು’ ಎಂದು ಅವರು ರಾಜ್ಯ  ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !