ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೊಂದು ಹುಸಿ ಬಾಂಬ್‌ ಕರೆ

Last Updated 30 ಜನವರಿ 2020, 4:03 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ಸಂಜೆ ಮತ್ತೊಂದು ಹುಸಿ ಬಾಂಬ್‌ ಕರೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.

ಅನಾಮಧೇಯ ವ್ಯಕ್ತಿಯೊಬ್ಬ ವಿಮಾನ ನಿಲ್ದಾಣದ ಎಟಿಎಸ್‌ಗೆ ಕರೆ ಮಾಡಿ, ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿರುವುದಾಗಿ ಹೇಳಿ ಕೂಡಲೇ ಕರೆ ಕಡಿತಗೊಳಿಸಿದ್ದಾನೆ ಎಂದು ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತಾ ಸಿಬ್ಬಂದಿ, ತೀವ್ರ ತಪಾಸಣೆ ಮಾಡಿದ್ದಾರೆ. ತಪಾಸಣೆ ನಂತರ ಇದೊಂದು ಹುಸಿ ಬಾಂಬ್‌ ಕರೆ ಎಂದು ಗೊತ್ತಾಗಿದೆ. ನಗರದಲ್ಲಿ ಸೋಮವಾರ ಸಿಎಎ ಪರ ಸಮಾವೇಶದಲ್ಲಿ ಭಾಗವಹಿಸಲು ಬಂದಿದ್ದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ವಿಮಾನ ಟೇಕ್‌ಆಫ್‌ ಆದ ನಂತರ ಈ ಕರೆ ಬಂದಿತ್ತು ಎಂದು ಮೂಲಗಳು ತಿಳಿಸಿವೆ.

ಕಳೆದ ವಾರ ಆದಿತ್ಯ ರಾವ್‌ ಸ್ಫೋಟಕ ಇಟ್ಟಿದ್ದರಿಂದ ವಿಮಾನ ನಿಲ್ದಾಣದಲ್ಲಿ ಆತಂಕ ಉಂಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT