ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ.ಕ. ಜಿಲ್ಲೆಯಲ್ಲಿ 7 ನೇ ಕೋವಿಡ್‌–19 ಪ್ರಕರಣ ದೃಢ

Last Updated 27 ಮಾರ್ಚ್ 2020, 14:48 IST
ಅಕ್ಷರ ಗಾತ್ರ

ಮಂಗಳೂರು: ದುಬೈನಿಂದ ಇದೇ 21 ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಬೆಳ್ತಂಗಡಿ ತಾಲ್ಲೂಕಿನ ಕರಾಯ ಗ್ರಾಮದ 21 ವರ್ಷದ ಯುವಕನಿಗೆ ಕೋವಿಡ್–19 ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ 7 ನೇ ಕೋವಿಡ್–19 ವರದಿಯಾಗಿದೆ.

ಈ ಯುವಕ ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದು, ಅಲ್ಲಿಂದ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಸ್ವಗ್ರಾಮಕ್ಕೆ ತಲುಪಿದ್ದ. ಈ ವ್ಯಕ್ತಿ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದು, ಇದೇ 24 ರಂದು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದೇ ಆತನ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಶುಕ್ರವಾರ ಕೋವಿಡ್–19 ದೃಢಪಟ್ಟಿದೆ.

ವ್ಯಕ್ತಿಯ ಹತ್ತಿರದ ಸಂಬಂಧಿಗಳನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದ್ದು, ಈ ಯುವಕನ ಸಂಪರ್ಕದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈತನ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಯಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT