ಮಂಗಳವಾರ, ಜನವರಿ 28, 2020
29 °C
ಘರ್ಷಣೆಯಲ್ಲಿ ಗುಂಡೇಟಿಗೆ ಬಲಿಯಾದ ಇಬ್ಬರು

ಮೀನು ವ್ಯಾಪಾರಿ ಮೆಕ್ಯಾನಿಕ್ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಪೌರತ್ವ ತಿದ್ದುಪ‍ಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆಯಲ್ಲಿ ನಡೆದ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ನಡೆದ ಸಂಘರ್ಷದಲ್ಲಿ ನಗರದ ಕಂದಕ್ ನಿವಾಸಿ ಅಬ್ದುಲ್ ಜಲೀಲ್ (49) ಮತ್ತು ಕುದ್ರೋಳಿ ನಿವಾಸಿ ನೌಸೀನ್ (23) ಮೃತಪಟ್ಟಿದ್ದಾರೆ.

ಜಲೀಲ್ ನಗರದ ದಕ್ಕೆಯಲ್ಲಿ ಮೀನು ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಅವರಿಗೆ ಇಬ್ಬರು ಮಕ್ಕಳು ಮತ್ತು ಪತ್ನಿ ಇದ್ದಾರೆ.

ಕುದ್ರೋಳಿಯ ನೌಸೀನ್ ಬಂದರ್‌ನಲ್ಲಿ ಮೆಕ್ಯಾನಿಕ್‌ ಆಗಿದ್ದಾರೆ. ಸಂಜೆ ವೇಳೆ ಬಂದರ್‌ನ ಮಸೀದಿಗೆ ತೆರಳಿ ಪ್ರಾರ್ಥನೆ ಮುಗಿಸಿ ವಾಪಸಾಗುವಾಗ ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಘರ್ಷಣೆಯಲ್ಲಿ ಪಾಲ್ಗೊಂಡಿದ್ದರು: ಆದರೆ, ಇವರಿಬ್ಬರು ಘರ್ಷಣೆಯಲ್ಲಿ ಪಾಲ್ಗೊಂಡಿದ್ದರು ಎಂದು ನಗರ ಪೊಲೀಸ್‌ ಆಯುಕ್ತ ಡಾ.ಪಿ.ಎಸ್‌. ಹರ್ಷ ಸ್ಪಷ್ಟಪಡಿಸಿದ್ದಾರೆ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು