ಕೊಂಕಣಿ ಅಕಾಡೆಮಿ ಪ್ರಶಸ್ತಿಗೆ ಅರ್ಜಿ ಆಹ್ವಾನ

7

ಕೊಂಕಣಿ ಅಕಾಡೆಮಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Published:
Updated:

ಮಂಗಳೂರು: ಕೊಂಕಣಿ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2018 ನೇ ಸಾಲಿನಲ್ಲಿ ಕೊಂಕಣಿ ಸಾಹಿತ್ಯ, ಕೊಂಕಣಿ ಕಲೆ, ಕೊಂಕಣಿ ಜಾನಪದ ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಳಿಗಾಗಿ ಅರ್ಜಿ ಕರೆಯಲಾಗಿದೆ. ಈ ಪ್ರಶಸ್ತಿಯು ₹50ಸಾವಿರ ಗೌರವಧನ, ಪ್ರಮಾಣಪತ್ರವನ್ನು ಒಳಗೊಂಡಿದೆ.

2018 ರಲ್ಲಿ ಪ್ರಕಟಿತವಾದ ಕೊಂಕಣಿ ಕವನ ಅಥವಾ ಲೇಖನ ಅಥವಾ ವಿಮರ್ಶೆ, ಕೊಂಕಣಿ ಸಣ್ಣಕತೆ ಅಥವಾ ಕಾದಂಬರಿ ಅಥವಾ ಅಧ್ಯಯನ ಕೃತಿ, ಕೊಂಕಣಿಗೆ ಭಾಷಾಂತರಿಸಿದ ಕೃತಿಗಳನ್ನು ಲೇಖಕರು, ಪ್ರಕಾಶಕರಿಂದ ಪುಸ್ತಕದ 4 ಪ್ರತಿಗಳ ಜತೆಗೆ ಪುಸ್ತಕ ಬಹುಮಾನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪುಸ್ತಕ ಬಹುಮಾನವು ₹25ಸಾವಿರ -ಗೌರವಧನ, ಪ್ರಮಾಣಪತ್ರ ಒಳಗೊಂಡಿದೆ.

ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ‘ಕೊಂಕಣಿ ಅಕಾಡೆಮಿ ಗೌರವ ಪ್ರಶಸ್ತಿ-2018’ ಹಾಗೂ ‘ಕೊಂಕಣಿ ಅಕಾಡೆಮಿ ಪುಸ್ತಕ ಬಹುಮಾನ ಯೋಜನೆ-2018’ ಎಂದು ಕಡ್ಡಾಯವಾಗಿ ಬರೆದು, ರಿಜಿಸ್ಟ್ರಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಹಾನಗರ ಪಾಲಿಕೆ ಕಟ್ಟಡ, ಲಾಲ್‌ಬಾಗ್, ಮಂಗಳೂರು-3 ಇಲ್ಲಿಗೆ ಜನವರಿ 15 ರೊಳಗಾಗಿ ಕಳುಹಿಸಿಕೊಡುವಂತೆ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !