ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ

Last Updated 11 ಜೂನ್ 2020, 21:14 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸಚಿವ ಸಂಪುಟ ಸಭೆ ತೀರ್ಮಾನ ತೆಗೆದುಕೊಂಡಿದೆ.

‘ಮುಂದಿನ ಎರಡು ಅಥವಾ ಮೂರು ತಿಂಗಳಲ್ಲಿ ಚುನಾವಣೆ ನಡೆಸಲಾಗುವುದು. ಹೊರಗಿನಿಂದ ಸದಸ್ಯರನ್ನು ನೇಮಿಸುತ್ತೇವೆ ಎಂದು ವಿರೋಧ ಪಕ್ಷಗಳು ಹುಯಿಲೆಬ್ಬಿಸಿದ್ದರು. ಅಂತಹ ಯಾವುದೇ ಉದ್ದೇಶ ಸರ್ಕಾರಕ್ಕೆ ಇರಲಿಲ್ಲ. ಜಿಲ್ಲಾಧಿಕಾರಿಗಳು ತಕ್ಷಣವೇ ಆಡಳಿತಾಧಿಕಾರಿಗಳನ್ನು ನೇಮಿಸಲಿದ್ದಾರೆ’ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಎಲ್ಲ ಗ್ರಾಮ ಪಂಚಾಯಿತಿಗಳ ಸದಸ್ಯರ ಅಧಿಕಾರ ಅವಧಿ ಪೂರ್ಣಗೊಂಡಿದೆ. ಕೋವಿಡ್‌ ಲಾಕ್‌ಡೌನ್‌ ಇರುವುದರಿಂದ ಮಾರ್ಗಸೂಚಿಯ ಪ್ರಕಾರ ಚುನಾವಣೆ ನಡೆಸುವಂತಿಲ್ಲ ಎಂದು ಅವರು ಹೇಳಿದರು.

ಸಹಕಾರ ಸೊಸೈಟಿಗಳಿಗೆ ಚುನಾವಣೆ:ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಬಿಟ್ಟು ಉಳಿದ ಎಲ್ಲ ಸಹಕಾರ ಸೊಸೈಟಿಗಳಿಗೆ ಚುನಾವಣೆ ಪ್ರಕ್ರಿಯೆ ನಡೆಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT