ಭಾನುವಾರ, ಸೆಪ್ಟೆಂಬರ್ 20, 2020
21 °C

ಶಿವಾಜಿ ಛತ್ರಪ್ಪಗೆ ಡಿ.ದೇವರಾಜ ಅರಸು ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: 2018 ನೇ ಸಾಲಿನ ಡಿ.ದೇವರಾಜ ಅರಸು ರಾಜ್ಯ ಮಟ್ಟದ ಪ್ರಶಸ್ತಿಗೆ ಸಮಾಜ ಸುಧಾರಕ ಶಿವಾಜಿ ಛತ್ರಪ್ಪ ಕಾಗಣಿಕಾರ ಆಯ್ಕೆಯಾಗಿದ್ದಾರೆ.

 ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಸಾಹಿತಿ ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯ ಆಯ್ಕೆ ಸಮಿತಿ ಬೆಳಗಾವಿಯ ಕಾಗಣಿಕಾರ ಅವರನ್ನು ಪ್ರಶಸ್ತಿ ಆಯ್ಕೆ ಮಾಡಿದೆ. ಪ್ರಶಸ್ತಿ ₹5 ಲಕ್ಷ ನಗದು ಒಳಗೊಂಡಿದೆ.ಕಾಗಣಿಕಾರ ಅವರು ‘ಜನ ಜಾಗರಣಾ ಸಂಸ್ಥೆ’ಯ ಮೂಲಕ ರಾತ್ರಿ ಶಾಲೆಗಳನ್ನು ಆರಂಭಿಸಿದರು. ಅರಣ್ಯ ಪ್ರದೇಶಗಳಲ್ಲಿ ಸುತ್ತಾಡಿ ಅಲ್ಲಿನ ಜನರಿಗೆ ಶೈಕ್ಷಣಿಕ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು.

‘ದೀನಬಂಧು’ ಎಂಬ ಸರಳ ಗೋಬರ್‌ ಗ್ಯಾಸ್‌ಗಳನ್ನು ಸರ್ಕಾರೇತರ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಪ್ರತಿ ಮನೆಗೂ ಅಳವಡಿಸುವ ವ್ಯವಸ್ಥೆ ಮಾಡಿದರು. 1978 ರಲ್ಲಿ ‘ಮಹಿಳಾ ಬಚತ್‌ ಘಟ್‌’ ಎಂಬ ಸ್ವಸಹಾಯ ಗುಂಪುಗಳನ್ನು ರಚಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು