ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯಲು ಕಾರ್ಡ್ ಬೇಕಿಲ್ಲ: ಆರೋಗ್ಯ ಸಚಿವ

7

ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯಲು ಕಾರ್ಡ್ ಬೇಕಿಲ್ಲ: ಆರೋಗ್ಯ ಸಚಿವ

Published:
Updated:

ಬೆಂಗಳೂರು: ‘ರೋಗಿಗಳು ಸದ್ಯ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ ತಂದರೂ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ನೀಡಲಾಗುತ್ತದೆ’ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಕಾರ್ಡ್ ಇಲ್ಲದಿದ್ದರೂ ಜನರು ಆತಂಕ ಪಡೆಯಬೇಕಿಲ್ಲ. ಕಾರ್ಡ್‌ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯ ಇಲ್ಲ. 2019ರ ಮಾರ್ಚ್ ಒಳಗೆ ಎಲ್ಲರಿಗೂ ಕಾರ್ಡ್ ವಿತರಿಸುತ್ತೇವೆ’ ಎಂದರು.

‘ಮೊದಲ ಹಂತದಲ್ಲಿ ಪ್ರಮುಖ 11 ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಾರ್ಡ್ ನೀಡಲಾಗಿದೆ. ಎರಡನೇ ಹಂತದಲ್ಲಿ ಜಿಲ್ಲಾ ಆಸ್ಪತ್ರೆಗಳು ಸೇರಿದಂತೆ ಪ್ರಮುಖ ಆಸ್ಪತ್ರೆಗಳಲ್ಲಿ ನೋಂದಣಿ ಮಾಡಲಾಗುತ್ತದೆ. ಅಕ್ಟೋಬರ್ ಅಂತ್ಯದ ವೇಳೆಗೆ ತಾಲ್ಲೂಕು ಆಸ್ಪತ್ರೆಗಳಲ್ಲಿ ರೋಗಿಗಳ ನೋಂದಣಿ ಆರಂಭಿಸುತ್ತೇವೆ’ ಎಂದರು.

ಶಿಫಾರಸು ವಿಧಾನ: ‘ಈ ಯೋಜನೆಯಡಿ ಪ್ರಾಥಮಿಕ ಹಾಗೂ ಸಾಮಾನ್ಯ ದ್ವಿತೀಯ ಆರೋಗ್ಯ ಸೇವೆಯನ್ನು ಸರ್ಕಾರಿ ಆಸ್ಪತ್ರೆಗಳಲ್ಲಷ್ಟೇ ಪಡೆಯಬಹುದು. ನಿರ್ದಿಷ್ಟ ದ್ವಿತೀಯ ಹಂತದ ಕ್ಲಿಷ್ಟಕರ ಚಿಕಿತ್ಸೆಗಳು ಹಾಗೂ ತೃತೀಯ ಹಂತದ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತದೆ. ಒಂದು ವೇಳೆ ಈ ಆಸ್ಪತ್ರೆಗಳಲ್ಲಿ ಸೌಲಭ್ಯ ಇಲ್ಲದಿದ್ದರೆ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡಲಾಗುತ್ತದೆ. ತುರ್ತು ಚಿಕಿತ್ಸೆಗಳಿಗೆ ಯಾವುದೇ ಶಿಫಾರಸಿನ ಅಗತ್ಯ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !