ಬಂಧನದಲ್ಲಿರುವ ಶಾಸಕ ಗಣೇಶ್: ಜಾಮೀನು ಕೋರಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ

ಶುಕ್ರವಾರ, ಮಾರ್ಚ್ 22, 2019
28 °C

ಬಂಧನದಲ್ಲಿರುವ ಶಾಸಕ ಗಣೇಶ್: ಜಾಮೀನು ಕೋರಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ

Published:
Updated:

ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಶಾಸಕ ಜೆ.ಎನ್. ಗಣೇಶ್ ಜಾಮೀನು ಕೋರಿ ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಶನಿವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು, ಬಿಡದಿ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಿದ್ದ ವಕೀಲ ಸಿ.ಎಚ್.ಹನುಮಂತರಾಯ ಅವರು, ಇದೇ 7 ರಂದು ವಿಚಾರಣೆ  ಕೈಗೆತ್ತಿಕೊಳ್ಳುವಂತೆ ಕೋರಿದರು.

ಇದಕ್ಕೆ ಪ್ರಾಸಿಕ್ಯೂಷನ್ ಪರ ಹಾಜರಿದ್ದ ವಕೀಲರು, ಹತ್ತು ದಿನಗಳ ಕಾಲಾವಕಾಶ ಬೇಕು ಎಂದು ಮನವಿ ಮಾಡಿದರು.

ನ್ಯಾಯಾಧೀಶರು ಇದೇ 8ಕ್ಕೆ ದಿನಾಂಕ ನಿಗದಿಗೊಳಿಸಿ ವಿಚಾರಣೆ ಮುಂದೂಡಿದರು.

ಬರಹ ಇಷ್ಟವಾಯಿತೆ?

 • 5

  Happy
 • 3

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !