ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಬಾವಳಿ ಉಸ್ತುವಾರಿಯ ತೆಲಂಗಾಣದಲ್ಲಿ ಬಿಜೆಪಿಗೆ 4 ಸ್ಥಾನ

Last Updated 25 ಮೇ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಉಸ್ತುವಾರಿ ವಹಿಸಿಕೊಂಡಿದ್ದ ತೆಲಂಗಾಣದಲ್ಲಿ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಮಾತ್ರ ಬಿಜೆಪಿ ಗೆದ್ದಿತ್ತು. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲೂ ಭಾರಿ ಹಿನ್ನಡೆ ಅನುಭವಿಸಿತ್ತು.2019ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿದ್ದ ಬಿಜೆಪಿ ರಾಷ್ಟ್ರೀಯ ನಾಯಕರು, ಆರ್‌ಎಸ್‌ಎಸ್‌ ಹಿನ್ನೆಲೆಯ ಅರವಿಂದ ಲಿಂಬಾವಳಿ ಅವರನ್ನು ಆ ರಾಜ್ಯದ ಉಸ್ತುವಾರಿಯನ್ನಾಗಿ ನೇಮಿಸಿದ್ದರು.

ಆರ್‌ಎಸ್‌ಎಸ್‌ ನಾಯಕರ ಮಾರ್ಗದರ್ಶನದಂತೆ ಗೆಲ್ಲುವ ಕ್ಷೇತ್ರಗಳನ್ನಷ್ಟೇ ಗಮನದಲ್ಲಿಟ್ಟುಕೊಂಡು ಲಿಂಬಾವಳಿ ಅಖಾಡ ಸಜ್ಜುಗೊಳಿಸಿದ್ದರು.ಪ್ರಧಾನಿ ನರೇಂದ್ರ ಮೋದಿ ಮತ್ತುಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ತೆಲಂಗಾಣದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದರು.

ಕೋಲಾರ ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿಯಿಂದ ಎಸ್.ಮುನಿಸ್ವಾಮಿ ಅವರನ್ನು ಕಣಕ್ಕಿಳಿಸಲು ಲಿಂಬಾವಳಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿಯೇ ಅಲ್ಲಿಯೂ ಸತತ ಏಳು ಬಾರಿ ಗೆದ್ದಿದ್ದ ಕಾಂಗ್ರೆಸ್‌ನ ಕೆ.ಎಚ್. ಮುನಿಯಪ್ಪ ಅವರನ್ನು ಸೋಲಿಸುವಲ್ಲಿ ಬಿಜೆಪಿ ಯಶಸ್ವಿಯಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT