ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಯತ್ನ ಆರೋಪ: ವಿವರ ಕೇಳಿದ ಹೈಕೋರ್ಟ್

Last Updated 8 ಏಪ್ರಿಲ್ 2020, 20:26 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊರೋನಾ ಚಿಕಿತ್ಸೆಗಾಗಿ ಶ್ರಮಿಸುತ್ತಿರುವ ವೈದ್ಯರು, ನೌಕರರು ಮತ್ತು ಆಶಾ ಕಾರ್ಯಕರ್ತರ ಜೀವಕ್ಕೆ ರಕ್ಷಣೆ ಒದಗಿಸಲು ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ಧಾರವಾಡದ ಡಾ.ರಾಜೀವ್ ರಮೇಶ್ ಗೋಥೆ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

‘ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ವೇತನ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆಯೂ ವಿವರ ನೀಡಿ’ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 9ಕ್ಕೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?: ‘ವೈದ್ಯಕೀಯ ಸೌಲಭ್ಯ ಒದಗಿಸುತ್ತಿರುವ ಸಿಬ್ಬಂದಿ, ಆಶಾ ಕಾರ್ಯಕರ್ತರಿಗೆ ಅಗತ್ಯ ಪ್ರಮಾಣದಲ್ಲಿ ಪಿಪಿಇ ಕಿಟ್ ಒದಗಿಸಬೇಕು. ಅಂತೆಯೇವೈದ್ಯರು, ನೌಕರರು ಮತ್ತು ಆಶಾ ಕಾರ್ಯಕರ್ತರ ಮೇಲೆ ಇತ್ತೀಚೆಗೆ ಕೆಲವರು ಹಲ್ಲೆ ನಡೆಸಲು ಯತ್ನಿಸಿದ ಆರೋಪಗಳಿವೆ. ಆದ್ದರಿಂದ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT