ಭಾನುವಾರ, ಅಕ್ಟೋಬರ್ 20, 2019
21 °C

ಆಶಾ ಕಾರ್ಯಕರ್ತೆಯರ ಗೌರವ ಧನ ₹500 ಹೆಚ್ಚಳ

Published:
Updated:

ಬೆಂಗಳೂರು: ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ತಿಂಗಳಿಗೆ ₹500 ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಪ್ರಸ್ತುತ ₹6,000 ಗೌರವ ಧನ ನೀಡಲಾಗುತ್ತಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ 41,425 ಕಾರ್ಯಕರ್ತೆಯರು ಇದ್ದು, ಗೌರವ ಧನ ಹೆಚ್ಚಳ ನಿರ್ಧಾರದಿಂದ ಸರ್ಕಾರದ ಮೇಲೆ ವಾರ್ಷಿಕ ₹25 ಕೋಟಿ ಹೆಚ್ಚುವರಿ ಹೊರೆ ಬೀಳಲಿದೆ ಎಂದು ಸಭೆಯ ನಂತರ ಕಾನೂನು ಹಾಗೂ ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

Post Comments (+)