ಶನಿವಾರ, ಮೇ 30, 2020
27 °C

ಸಿಎಂ ನಿಧಿಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಬಡತನದಲ್ಲಿ ಜೀವನ ನಡೆಸುತ್ತಿರುವ ಆಶಾ ಕಾರ್ಯಕರ್ತೆಯೊಬ್ಬರು ತಮ್ಮ ಗೌರವಧನದಲ್ಲಿ ₹ 2000 ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿ ಮಾದರಿಯಾಗಿದ್ದಾರೆ.

ಇಲ್ಲಿನ ಆಶಾ ಕಾರ್ಯಕರ್ತೆ ಯೋಗಿನಿ ಪಂಗಡಕರ್ ಅವರು, ನಿತ್ಯ ನಾಲ್ಕೈದು ಕಿ.ಮೀ ಕಾಲ್ನಡಿಗೆಯಲ್ಲಿ ಸಂಚರಿಸಿ, ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ‘ಸಾಮಾಜಿಕ ಕಾರ್ಯ ಮಾಡಿದ್ದಕ್ಕಾಗಿ ಸರ್ಕಾರ ನನಗೆ ನೀಡುವ ಗೌರವ ಧನದಲ್ಲಿ ಅಲ್ಪವನ್ನಾದರೂ, ತಿರುಗಿ ಸಮಾಜಕ್ಕೆ ಕೊಡಬೇಕು. ಇದು ಇತರರಿಗೆ ಪ್ರೇರಣೆಯಾಗಬೇಕು ಎಂಬ ಉದ್ದೇಶದಿಂದ ಪರಿಹಾರ ನಿಧಿಗೆ ಹಣ ಕೊಡಲು ಯೋಚಿಸಿದೆ’ ಎಂದು ಅವರು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು