ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ ಕಾರ್ಯಕರ್ತೆಯರಿಗೆ ಪತ್ತಿನ ಸಹಕಾರ ಸಂಘ

Last Updated 6 ಜೂನ್ 2020, 20:14 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗಾಗಿ ಪ್ರತಿ ಜಿಲ್ಲೆಯಲ್ಲಿ ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಸಹಕಾರ ಸಂಘಗಳ ನಿಬಂಧಕರಿಗೆ ಸೂಚನೆ ನೀಡಿದ್ದಾರೆ.

‘40 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರಿಗೆ ಆತ್ಮಸ್ಥೈರ್ಯ ತುಂಬಲು ಇಂತಹ ಪ್ರಯತ್ನ ಅಗತ್ಯ. ಪ್ರತಿ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬೇಕು. ಅವರಲ್ಲಿ ಪತ್ತಿನ ಸಹಕಾರ ಸಂಘದ ಬಗ್ಗೆ ಅರಿವು ಮೂಡಿಸಬೇಕು. 15 ದಿನದೊಳಗೆ ಈ ನಿಟ್ಟಿನಲ್ಲಿ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದ್ದಾರೆ.

ಕೋವಿಡ್‌ ಸಮರ ಸೇನಾನಿಗಳಾದ ಇವರಿಗೆ ಈಚೆಗೆ ಸಹಕಾರ ಸಂಘಗಳ ವತಿಯಿಂದ ತಲಾ ₹ 3 ಸಾವಿರ ಪ್ರೋತ್ಸಾಹಧನ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT