ಕೆಪಿಎಸ್‌ಸಿ ಆದೇಶ ಹಿಂಪಡೆಯಲು ಸೂಚಿಸಿ: ಸ್ವಾಮೀಜಿ

7
ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯ

ಕೆಪಿಎಸ್‌ಸಿ ಆದೇಶ ಹಿಂಪಡೆಯಲು ಸೂಚಿಸಿ: ಸ್ವಾಮೀಜಿ

Published:
Updated:
Deccan Herald

ಚಿತ್ರದುರ್ಗ: ಮೀಸಲಾತಿ ಕುರಿತಂತೆ ಇದೇ 3 ರಂದು ಕೆಪಿಎಸ್‌ಸಿ ಜಾರಿಗೊಳಿಸಿದ ಆದೇಶಕ್ಕೆ ತಿದ್ದುಪಡಿ ತರಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕೂಡಲೇ ಸಚಿವ ಸಂಪುಟದ ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದರು.

‘ಆದೇಶದ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಬೆಳವಣಿಗೆಯನ್ನು ಹತ್ತಿಕ್ಕಲು ವ್ಯವಸ್ಥಿತವಾದ ಪಿತೂರಿ ಮಾಡಲಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿಯನ್ನು ತಕ್ಷಣವೇ ಅಮಾನತುಗೊಳಿಸಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

‘ಸಾಮಾಜಿಕ ನ್ಯಾಯದಡಿ ಮೀಸಲಾತಿ ವ್ಯಾಪ್ತಿಗೆ ಬರುವ ಪ್ರತಿಯೊಂದು ವರ್ಗವೂ ಮೀಸಲಾತಿ ಪಡೆಯಲು ಹಾಗೂ ಸಾಮಾನ್ಯ ವರ್ಗ ದೊಂದಿಗೆ ಸ್ಪರ್ಧಾತ್ಮಕವಾಗಿ ಪೈಪೋಟಿ ನೀಡಲು ಸಂವಿಧಾನದಡಿ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಅದರ ಆಶಯ ಕಾಪಾಡಲು ಮುಂದಾಗಬೇಕು’ ಎಂದು ಸರ್ಕಾರಕ್ಕೆ ಮನವಿ ಮಾಡಿದರು.

‘ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಹಿಂಬಡ್ತಿ ವಿಷಯದಲ್ಲಿ ಸ್ಪಷ್ಟ ನಿಲುವು ತೆಗೆದುಕೊಳ್ಳುತ್ತಿಲ್ಲ. ಮೀಸಲಾತಿ ವಿಚಾರದಲ್ಲಿ ಉಂಟಾಗುತ್ತಿರುವ ಗೊಂದಲ ಸರಿಪಡಿಸುವಲ್ಲಿಯೂ ಆಸಕ್ತಿ ತೋರುತ್ತಿಲ್ಲ. ಬುದ್ಧಿವಂತಿಕೆಯಿಂದಲೇ ಸಮಯ ಮುಂದೂಡುತ್ತಿದೆ. ಮೀಸಲಾತಿ ಕಡೆಗಣಿಸುವ ಕೆಲಸ ಸರ್ಕಾರದ ಜಾಣ ಕುರುಡು ಪ್ರದರ್ಶನವೇ’ ಎಂದು ಪ್ರಶ್ನಿಸಿದರು. ಡಿಸೆಂಬರ್ 1ರ ಒಳಗೆ ಆದೇಶ ಹಿಂಪಡೆಯದಿದ್ದರೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !