ಮಂಗಳವಾರ, ಫೆಬ್ರವರಿ 25, 2020
19 °C

ಪಾನಮತ್ತ ಯೋಧನಿಂದ ಸಿಪಿಐ ಮೇಲೆ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹರಿಹರ: ನಗರದ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಸಮೀಪದ ಚೆಕ್‍ಪೋಸ್ಟ್‌ ಬಳಿ ಕಾರ್ಯನಿರ್ವಹಿಸುತ್ತಿದ್ದ ಸಿಪಿಐ ಐ.ಎಸ್‍. ಗುರುನಾಥ್‍ ಅವರ ಮೇಲೆ ಸೋಮವಾರ ತಡರಾತ್ರಿ ಯೋಧರೊಬ್ಬರು ಹಲ್ಲೆ ಮಾಡಿದ್ದಾರೆ.

ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಣೆಬೆನ್ನೂರು ತಾಲ್ಲೂಕಿನ ಕವಲೆತ್ತು ಗ್ರಾಮದ ಪ್ರಭು ಹೊನ್ನಪ್ಪನವರ ಪಾನಮತ್ತ
ರಾಗಿ ಪಟ್ಟಣದಲ್ಲಿ ಬೈಕ್‍ ಚಲಾಯಿಸುತ್ತಿದ್ದರು. ಸಿಪಿಐ ಬೈಕ್‍ ನಿಲ್ಲಿಸಿ ವಿಚಾರಿಸುತ್ತಿರುವಾಗ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಸಿಪಿಐ ಮೂಗಿಗೆ ಬಲವಾದ ಪೆಟ್ಟು ಬಿದ್ದಿದೆ.

ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು