ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಜಾತಿ ಪ್ರಮಾಣಪತ್ರ: 27 ತಹಶೀಲ್ದಾರ್‌ ವಿರುದ್ಧ ಕ್ರಮಕ್ಕೆ ಶಿಫಾರಸು

Last Updated 9 ಮಾರ್ಚ್ 2020, 22:28 IST
ಅಕ್ಷರ ಗಾತ್ರ

ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ 27 ತಹಶೀಲ್ದಾರ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆಗೆ ಶಿಫಾರಸು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದಲ್ಲಿ 973 ನಕಲಿ ಜಾತಿ ಪ್ರಮಾಣಪತ್ರ ಪ್ರಕರಣಗಳನ್ನು ದಾಖಲಿಸಲಾಗಿದ್ದು, 610 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. 12 ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ’ ಎಂದರು.

ಕಾಂಗ್ರೆಸ್‌ನ ಪ್ರಿಯಾಂಕ್‌ ಖರ್ಗೆ, ‘ತಹಶೀಲ್ದಾರ್‌ಗಳ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ಸಮಾಜ ಕಲ್ಯಾಣ ಇಲಾಖೆ ಇಲ್ಲ. ಶಿಫಾರಸು ಮಾಡುವ ಅಧಿಕಾರವಷ್ಟೇ ಇದೆ’ ಎಂದರು. ಕಾಂಗ್ರೆಸ್‌ನ ಪಿ.ಟಿ.ಪರಮೇಶ್ವರ ನಾಯ್ಕ್‌, ‘ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಬೇಕು. ಈ ಸಂಬಂಧ ಮಸೂದೆ ಮಂಡಿಸಿ’ ಎಂದು ಸಲಹೆ ನೀಡಿದರು.

ಎನ್‌.ಮಹೇಶ್‌, ‘390 ಪ್ರಕರಣಗಳನ್ನು ರದ್ದುಗೊಳಿಸಲಾಗಿದೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದ ಕಾರಣ ಹೀಗಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT