ಮಂಗಳವಾರ, ಆಗಸ್ಟ್ 3, 2021
21 °C

ಸದ್ಯ ಕೃಷ್ಣಮಠದಲ್ಲಿ ದೇವರ ದರ್ಶನ ಇಲ್ಲ: ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಸದ್ಯ ಕೃಷ್ಣಮಠದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ. ಪರಿಸ್ಥಿತಿ ನೋಡಿಕೊಂಡು ಮುಂದೆ ದರ್ಶನಕ್ಕೆ ಅನುಮತಿ ನೀಡಲಾಗುವುದು ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದರು.

ಕೃಷ್ಣಮಠದ ಪರಂಪರೆ ಉಳಿಸುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಕ್ತರು ಮನೆಯಲ್ಲಿದ್ದುಕೊಂಡು ದೇವರಿಗೆ ಪ್ರಾರ್ಥನೆ ಸಲ್ಲಿಸಬೇಕು. ಮಠದಲ್ಲಿಯೂ ದೇಶದ ಒಳಿತಿಗೆ ಪೂಜೆ, ಪ್ರಾರ್ಥನೆಗಳು ನಡೆಯಲಿವೆ ಎಂದು ಶ್ರೀಗಳು ಹೇಳಿದರು.

ಮನಸ್ಸಿನ ದೋಷಗಳು ರೋಗಕ್ಕೆ ಮೂಲ ಕಾರಣ. ಆಯುರ್ವೇದದ ಪ್ರಕಾರ ಮನಸ್ಸು ಚೆನ್ನಾಗಿದ್ದರೆ ಎಂತಹ ರೋಗಗಳನ್ನೂ ಗೆಲ್ಲಬಹುದು. ಹಾಗಾಗಿ, ಮನಸ್ಸನ್ನು ಗಟ್ಟಿಯಾಗಿಟ್ಟುಕೊಂಡು ಒಳ್ಳೆಯ ಚಿಂತನೆಗಳನ್ನು ಬೆಳೆಸಿಕೊಂಡು ರೋಗ ನಿವಾರಕ ಶಕ್ತಿಯನ್ನು ವೃದ್ಧಿಗೊಳಿಸಿಕೊಳ್ಳೋಣ ಎಂದು ಸ್ವಾಮೀಜಿ ಸಲಹೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು