ಸೋಮವಾರ, ಜನವರಿ 27, 2020
26 °C
ಅಕ್ರಮ ಮರಳು ಸಾಗಣೆ ತಡೆಯುವಲ್ಲಿ ವಿಫಲ ಆರೋಪ

ಅಥಣಿ ಪಿಎಸ್ಐ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ತಮ್ಮ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಲ್ಲಿ ನಿರ್ಲಕ್ಷ್ಯ ‌ವಹಿಸಿದರೆಂಬ ಆರೋಪದ ಮೇಲೆ ಅಥಣಿ ಪೊಲೀಸ್ ಠಾಣೆ ಪಿಎಸ್ಐ ಉಸ್ಮಾನಸಾಬ್ ಅವಟಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಅಥಣಿ ತಾಲ್ಲೂಕಿನ ಅಗ್ರಾಣಿ ಹಳ್ಳದ ದಂಡೆಯಲ್ಲಿ ಅಕ್ರಮ ಮರಳು ಸಾಗಣೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಸ್ಥಳೀಯರು ದೂರು ನೀಡಿದರೂ ಕ್ರಮ ಕೈಗೊಂಡಿರಲಿಲ್ಲ. ಈ ದೂರು ಎಸ್ಪಿ ಕಚೇರಿವರೆಗೂ ಹೋಗಿತ್ತು. ಇದರ ಆಧಾರದ ಮೇಲೆ ಎಸ್ ಐ ವಿರುದ್ಧ ಕ್ರಮ ವಹಿಸಲಾಗಿದೆ. ಡಿಸಿಐಬಿ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಐದು ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು