ಬುಧವಾರ, ಮೇ 25, 2022
29 °C

ಪಾದರಾಯನಪುರ ದಾಂದಲೆ: ನನ್ನ ಹೆಸರು ಕೆಡಿಸುವ ಯತ್ನ, ಕಠಿಣ ಕ್ರಮ ಕೈಗೊಳ್ಳಿ: ಜಮೀರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ನಡೆದ ಗಲಾಟೆ ಹಿಂದೆ ನನ್ನ ಹೆಸರು ಕೆಡಿಸುವ ರಾಜಕೀಯ ಪಿತೂರಿ ಇರಬಹುದೆಂಬ ಸಂಶಯ ನನಗಿದೆ. ಈ ಬಗ್ಗೆ ನಾನೂ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಅವೆಲ್ಲವನ್ನೂ ನಾನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪಾದರಾಯನಪುರದಲ್ಲಿ‌ ಭಾನುವಾರ ರಾತ್ರಿ ಅಹಿತಕರ ಘಟನೆ‌ ನಡೆದ ಕ್ಷಣದಿಂದ ನಾನು ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ರಾತ್ರಿಯೇ ಜನತೆ ಮತ್ತು ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಹೇಳಿದ್ದೇನೆ ಎಂದಿದ್ದಾರೆ.

ಕೊರೊನಾ ಸೋಂಕು ಹರಡದಂತೆ ರಾತ್ರಿ ಹಗಲು ಶ್ರಮಿಸುತ್ತಿರುವ ಪೊಲೀಸ್ ಮತ್ತು ವೈದ್ಯಕೀಯ ಸಿಬ್ಬಂದಿಗಳ ಜೊತೆ ಸಹಕರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಏನಾದರೂ ಸಮಸ್ಯೆಗಳಿದ್ದರೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಬೇಕೇ ಹೊರತು ಕಾನೂನು ಉಲ್ಲಂಘನೆ ಮಾಡಿ ದಾಂಧಲೆ ಮಾಡುವುದಲ್ಲ ಎಂದಿದ್ದಾರೆ.

ಪಾದರಾಯನಪುರ ಗಲಾಟೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಗುರುತಿಸಿ ಶಿಕ್ಷಿಸುವ ಕೆಲಸ ಶೀಘ್ರವಾಗಿ ನಡೆಯಬೇಕು ಎಂದು‌ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ. ತನಿಖೆಗೆ ರಾಜ್ಯ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು