ಶನಿವಾರ, ಡಿಸೆಂಬರ್ 14, 2019
24 °C

ಹಲ್ಲೆ ಪ್ರಕರಣ: ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಹಲ್ಲೆಗೆ ಒಳಗಾಗಿ ಇಲ್ಲಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ತನ್ವೀರ್ ಸೇಠ್ ಅವರ ಆರೋಗ್ಯದಲ್ಲಿ ಮಂಗಳವಾರ ಚೇತರಿಕೆ ಕಂಡು ಬಂದಿದೆ‌.

ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಅಧೀಕ್ಷಕ ಡಾ.ಉಪೇಂದ್ರ ಶೆಣೈ, ‘ತನ್ವೀರ್ ಸೇಠ್ ಚಿಕಿತ್ಸೆಗೆ ಉತ್ತಮವಾಗಿಯೆ ಸ್ಪಂದಿಸುತ್ತಿದ್ದಾರೆ. ಸಂಜೆ ವೇಳೆಗೆ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗುವುದು’ ಎಂದು ಹೇಳಿದ್ದಾರೆ.

ಈ ಮಧ್ಯೆ ತನ್ವೀರ್ ಸೇಠ್ ಅವರ ಗನ್ ಮ್ಯಾನ್ ಫೈರೋಜ್ ಖಾನ್ ಅವರನ್ನು ಅಮಾನತುಪಡಿಸಲಾಗಿದೆ. ಫೈರೋಜ್ ಖಾನ್ ಇದ್ದಾಗ್ಯೂ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿರುವುದು ಭದ್ರತಾಲೋಪ ಎಂದು ಪರಿಗಣಿಸಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ರಾತ್ರಿ ಇಡೀ ವಿಚಾರಣೆ: ಹಲ್ಲೆಗೆ ಸಂಬಂಧಿಸಿದಂತೆ ವಶಕ್ಕೆ ತೆಗೆದುಕೊಂಡಿರುವ 10 ಮಂದಿಯನ್ನು ಪೊಲೀಸರು ಅಜ್ಞಾತಸ್ಥಳದಲ್ಲಿ ರಾತ್ರಿ ಇಡಿ ವಿಚಾರಣೆ ನಡೆಸಿದ್ದಾರೆ. ಇನ್ನಷ್ಟು ಮಂದಿಯ ಹುಡುಕಾಟದಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ... ತನ್ವೀರ್ ಸೇಠ್ ಕೊಲೆಗೆ ಸಂಘಟನೆ ಸಂಚು: ಐದು ಮಂದಿ ಪೊಲೀಸರ ವಶಕ್ಕೆ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು