ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಅಸ್ತಿತ್ವಕ್ಕಾಗಿ ತನ್ವೀರ್‌ ಸೇಠ್‌ ಮೇಲೆ ಹಲ್ಲೆ: ಬಸವರಾಜ ಬೊಮ್ಮಾಯಿ

Last Updated 20 ನವೆಂಬರ್ 2019, 8:46 IST
ಅಕ್ಷರ ಗಾತ್ರ

ಮೈಸೂರು: ರಾಜಕೀಯ ಅಸ್ತಿತ್ವಕ್ಕಾಗಿ ಶಾಸಕ ತನ್ವೀರ್‌ಸೇಠ್‌ ಮೇಲೆ ಹಲ್ಲೆ ನಡೆಸಲಾಗಿದೆ. ರಾಜಕೀಯ ಪೈಪೋಟಿ ಹಾಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಇದರ ಹಿಂದಿರುವುದು ಪ್ರಾಥಮಿಕ ತನಿಖೆ ವೇಳೆ ಸ್ಪಷ್ಟವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಂಧಿತ ಆರೋಪಿಯು ಪಿಎಫ್‌ಐ ಹಾಗೂ ಎಸ್‌ಡಿಪಿಐ ಎರಡೂ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದ. ಇಲ್ಲಿ ನಡೆದ ರಾಜು ಮತ್ತು ಇತರೆಡೆ ನಡೆದಿರುವ ಹತ್ಯೆಗಳಿಗೂ ಈ ಹಲ್ಲೆ ಪ್ರಕರಣಕ್ಕೂ ನಂಟಿದೆ. ಇನ್ನೆರಡು ದಿನಗಳಲ್ಲಿ ತನಿಖೆ ಪೂರ್ಣಗೊಳ್ಳಲಿದೆ ಎಂದು ಇಲ್ಲಿ ಬುಧವಾರ ಸುದ್ದಿಗಾರರಿಗೆ ಹೇಳಿದರು.

ತನಿಖೆ ಮುಗಿದ ನಂತರ ನಿರ್ದಿಷ್ಟವಾದ ಸಂಘಟನೆ ಇದರ ಹಿಂದಿದೆ ಎಂಬುದು ಸಾಬೀತಾದರೆ ಕೂಡಲೇ ಆ ಸಂಘಟನೆಯನ್ನು ನಿಷೇಧಿಸಲಾಗುವುದು ಎಂದು ಭರವಸೆ ನೀಡಿದರು.

ತನ್ವೀರ್‌ಸೇಠ್‌ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಸ್ವಲ್ಪ ಕಾಲ ನಡೆದಾಡಿದ್ದಾರೆ. ಕುಳಿತು ಉಪಾಹಾರ ಸೇವಿಸಿದ್ದಾರೆ. ಆತಂಕಪಡುವ ಅಗತ್ಯ ಇಲ್ಲ ಎಂದು ಅವರು ತಿಳಿಸಿದರು.

‘ಕೆಪಿಎಲ್‌ ಮ್ಯಾಚ್‌ಫಿಕ್ಸಿಂಗ್ ತನಿಖೆ ಮೇಲೆ ನನ್ನ ಪುತ್ರ ಹಸ್ತಕ್ಷೇಪ ನಡೆಸಿರುವುದು ಸುಳ್ಳು ಸುದ್ದಿ. ಈ ಪ್ರಕರಣಕ್ಕೂ ನಮ್ಮ ಕುಟುಂಬದವರಿಗೂ ಯಾವುದೇ ಸಂಬಂಧ ಇಲ್ಲ. ಬೇಕಾದರೆ ನೀವೇ ಪೊಲೀಸರನ್ನು ಕೇಳಿ’ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ಹಾಗೂ ನಿರ್ದಾಕ್ಷಿಣ್ಯವಾಗಿ ಮಾಡಿ ಎಂದು ನಾನೇ ಹೇಳಿದ್ದೇನೆ. ನಾನು ಹಾಗೂ ನನ್ನ ಪುತ್ರ ಕ್ರಿಕೆಟ್ ಆಡುತ್ತೇವೆ ಎಂದ ಮಾತ್ರಕ್ಕೆ ಈ ರೀತಿಯ ಆರೋಪ ಮಾಡುವುದು ಸರಿಯಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT