ಶುಕ್ರವಾರ, ಅಕ್ಟೋಬರ್ 18, 2019
27 °C

ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ

Published:
Updated:
Prajavani

ಗಂಗಾವತಿ (ಕೊಪ್ಪಳ ಜಿಲ್ಲೆ): ಕೇಂದ್ರ ಆರೋಗ್ಯ ಸಚಿವಾಲಯ ನೀಡುವ ‘ಕಾಯಕಲ್ಪ ಪ್ರಶಸ್ತಿ’ಗೆ ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಯು ಸತತ ಎರಡನೇ ಬಾರಿಗೆ ಆಯ್ಕೆಯಾಗಿದೆ. ಈ ಪ್ರಶಸ್ತಿಯು ₹15 ಲಕ್ಷ ನಗದು ಬಹುಮಾನ ಒಳಗೊಂಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶುಕ್ರವಾರ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್‌ ಅವರು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಈಶ್ವರ ಸವಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ರಾಜ್ಯದ 175 ತಾಲ್ಲೂಕು ಆಸ್ಪತ್ರೆಗಳಲ್ಲಿ ಗಂಗಾವತಿ ಆಸ್ಪತ್ರೆಯು ಸಾರ್ವಜನಿಕ ಸ್ನೇಹಿಯಾಗಿ ಕಾರ್ಯ ನಿರ್ವಹಿಸು ತ್ತಿರುವ ಕಾರಣ ಈ ಪ್ರಶಸ್ತಿ ಪಡೆದಿದೆ.

Post Comments (+)