ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವರಾಜ ಬೆಂಗೇರಿಗೆ ಶ್ರೀ ಶಿವಕುಮಾರ ಪ್ರಶಸ್ತಿ

Last Updated 9 ನವೆಂಬರ್ 2018, 19:34 IST
ಅಕ್ಷರ ಗಾತ್ರ

ಹೊಸದುರ್ಗ: ತಾಲ್ಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಶಿವಕುಮಾರ ಬಯಲು ರಂಗ ಮಂದಿರದಲ್ಲಿ ಶುಕ್ರವಾರ ಸಂಜೆ ನಡೆದ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಸಿರಿಗೆರೆ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಹಿರಿಯ ರಂಗಕರ್ಮಿ ಬಸವರಾಜ ಬೆಂಗೇರಿ ಅವರಿಗೆ ಈ ಬಾರಿಯ ‘ಶ್ರೀ ಶಿವಕುಮಾರ ಪ್ರಶಸ್ತಿ’ಯನ್ನು ಪ್ರದಾನ ಮಾಡಿದರು.

ಬಸವರಾಜ ಬೆಂಗೇರಿ ಓಂಕಾರೇಶ್ವರ ನಾಟ್ಯ ಸಂಘ, ಗದುಗಿನ ಪಂಚಾಕ್ಷರಿ ಗವಾಯಿ, ಪಕ್ಕಣ್ಣ ಅರಗೋಳ ಮಿತ್ರಮಂಡಳಿ, ಸಂಗಮೇಶ್ವರ ನಾಟ್ಯ ಕಂಪನಿಗಳಲ್ಲಿ ಅವರು ಕಾರ್ಯನಿರ್ವಹಿಸಿದ್ದಾರೆ. ‘ಸಂಪೂರ್ಣ ಹೇಮರಡ್ಡಿ ಮಲ್ಲಮ್ಮ’, ‘ಗಂಡುಗಲಿ ಎಚ್ಚಮನಾಯಕ’, ‘ಛತ್ರಪತಿ ಶಿವಾಜಿ’, ‘ಶಿರಹಟ್ಟಿ ಫಕೀರೇಶ್ವರ ಮಹಾತ್ಮೆ’, ‘ಜಗಜ್ಯೋತಿ ಬಸವೇಶ್ವರ’, ‘ನವಲಗುಂದದ ನಾಗಲಿಂಗಲೀಲೆ' ನಾಟಕಗಳಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ರಂಗಭೂಮಿಗೆ ಸಲ್ಲಿಸಿದ ಸೇವೆ ಪರಿಗಣಿಸಿ ಅವರಿಗೆ ₹50 ಸಾವಿರ ನಗದು ಹಾಗೂ ಅಭಿನಂದನಾ ಪತ್ರ ಒಳಗೊಂಡ ಪ್ರಶಸ್ತಿ ನೀಡಿ
ಗೌರವಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT