ಲೋಕಸಭಾ ಕಣಕ್ಕೆ ಈಶ್ವರಪ್ಪ: ಆಯನೂರು ವ್ಯಂಗ್ಯ

7

ಲೋಕಸಭಾ ಕಣಕ್ಕೆ ಈಶ್ವರಪ್ಪ: ಆಯನೂರು ವ್ಯಂಗ್ಯ

Published:
Updated:

ಶಿವಮೊಗ್ಗ: ಕಾಂಗ್ರೆಸ್–ಜೆಡಿಎಸ್ ಮಧ್ಯೆ ಹೊಂದಾಣಿಕೆ ಸಾಧ್ಯತೆ ಇದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರ ಉಳಿಸಿಕೊಳ್ಳಬೇಕಿದೆ. ಹಾಗಾಗಿ, ಶಿವಮೊಗ್ಗ ನಗರ ಶಾಸಕರನ್ನೇ ಕಣಕ್ಕೆ ಇಳಿಸುವ ಸಂಭವ ಇದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೊಸ ಬಾಂಬ್ ಸಿಡಿಸಿದರು.

ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪ ಹೆಸರು ಚರ್ಚೆಯಲ್ಲಿವೆ. ಇಬ್ಬರಲ್ಲಿ ಒಬ್ಬರು ಕಣಕ್ಕೆ ಇಳಿಯಬಹುದು. ಅಲ್ಲದೇ, ಈಶ್ವರಪ್ಪ ಅವರ ಪುತ್ರ ಕೆ.ಇ. ಕಾಂತೇಶ್ ಅವರೂ ಆಕಾಂಕ್ಷಿಯಾಗಬಹುದು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಅವರು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಅವರಿಗೆ ಟಿಕೆಟ್ ನೀಡುವ ಕುರಿತು ಪ್ರಸ್ತಾಪಿಸಲಾಗಿತ್ತು. ರಾಘವೇಂದ್ರ ಅವರಿಗೆ ಲೋಕಸಭಾ ಚುನಾವಣೆಯ ಟಿಕೆಟ್‌ ನೀಡುವುದು ಖಚಿತ ಎಂಬ ಕಾರಣಕ್ಕೆ ಒಂದೇ ಕುಟುಂಬದ ಇಬ್ಬರಿಗೆ ಬೇಡ ಎಂಬ ನಿರ್ಧಾರಕ್ಕೆ ಬರಲಾಗಿತ್ತು. ಹಾಗಾಗಿ, ಬಿ.ವೈ. ರಾಘವೇಂದ್ರ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !