ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ತೀರ್ಪು ನೀಡಿದ ಐವರಲ್ಲಿ ನ್ಯಾಯಮೂರ್ತಿ ಅಬ್ದುಲ್ ನಜೀರ್ ಕರ್ನಾಟಕದವರು

Last Updated 9 ನವೆಂಬರ್ 2019, 13:58 IST
ಅಕ್ಷರ ಗಾತ್ರ

ಬೆಂಗಳೂರು: ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ–ಬಾಬರಿ ಮಸೀದಿಗೆ ಸಂಬಂಧಿಸಿದ ಬಹುಕಾಲದ ಅನಿಶ್ಚಿತ ಸ್ಥಿತಿ ಕೊನೆಗೊಂಡಿದ್ದು, ಈ ಐತಿಹಾಸಿಕ ತೀರ್ಪು ನೀಡಿದ ಐವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾದಎಸ್.ಅಬ್ದುಲ್‌ ನಜೀರ್ ಕರ್ನಾಟಕದವರು.

ಕಾರ್ಕಳ ಸಮೀಪದ ಬೆಳುವಾಯಿ ಗ್ರಾಮದವರಾದ ಅಬ್ದುಲ್‌ ನಜೀರ್ ಅವರು ತಮ್ಮ ವಕೀಲಿ ವೃತ್ತಿಯನ್ನು ಕಾರ್ಕಳದ ವಕೀಲ ಎಮ್.ಕೆ ವಿಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಆರಂಭಿಸಿದರು. 1983ರಲ್ಲಿ ಬೆಂಗಳೂರಿಗೆ ಬಂದ ಅಬ್ದುಲ್ ನಜೀರ್ ಅವರು ಕರ್ನಾಟಕ ಹೈಕೋರ್ಟ್‌‌ನಲ್ಲಿ ಅಭ್ಯಾಸ ಮುಂದುವರಿಸಿದರು. 2004ರ ಸೆ. 24ರಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಎರಡು ವರ್ಷಗಳ ಹಿಂದಷ್ಟೇ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದ ಇವರು,ಸುಪ್ರೀಂಕೋರ್ಟ್‌ನ ಏಕೈಕ ಮುಸ್ಲಿಂ ನ್ಯಾಯಮೂರ್ತಿ ಎನಿಸಿದ್ದಾರೆ.

ನಜೀರ್ಅವರು ಮೂಡಬಿದರೆ ಜೈನ್ ಪ್ರೌಢಶಾಲೆ, ಮಹಾವೀರ ಕಾಲೇಜು ಹಾಗೂ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ತಮ್ಮ ವಿದ್ಯಾಭ್ಯಾಸ ಮಾಡಿದ್ದಾರೆ. ವೃತ್ತಿ ಜೀವನವನ್ನು ಆರಂಭಿಸಿ ಜನ ಮನ್ನಣೆ ಪಡೆದ ಅವರು ಬಹಳ ಸರಳ ಜೀವಿ.ಇವರ ನಡವಳಿಕೆಯ ಬಗ್ಗೆ ಎಲ್ಲರಿಗೂ ಗೌರವವಿದೆ.ತಲಾಕ್ ಕುರಿತು ತೀರ್ಪು ನೀಡಿದ ಪೀಠದಲ್ಲೂನಜೀರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT