‘ಆರೋಗ್ಯ ಕರ್ನಾಟಕ– ಆಯುಷ್ಮಾನ್‌ ಭಾರತ್ ವಿಲೀನ’

7

‘ಆರೋಗ್ಯ ಕರ್ನಾಟಕ– ಆಯುಷ್ಮಾನ್‌ ಭಾರತ್ ವಿಲೀನ’

Published:
Updated:

ಬೆಂಗಳೂರು: ಆರೋಗ್ಯ ಕರ್ನಾಟಕ ಮತ್ತು ಕೇಂದ್ರದ ಆಯುಷ್ಮಾನ್‌ ಭಾರತ ಯೋಜನೆಯನ್ನು ವಿಲೀನಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ರಾಜ್ಯದಲ್ಲಿದ್ದ ವಿವಿಧ ಆರೋಗ್ಯ ಕಾರ್ಯಕ್ರಮಗಳನ್ನು ಒಂದುಗೂಡಿಸಿ ‘ಆರೋಗ್ಯ ಕರ್ನಾಟಕ’ ಎಂಬ ಯೋಜನೆಯನ್ನು ಹಿಂದಿನ ಸರ್ಕಾರ ರೂಪಿಸಿತ್ತು. ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್‌ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದರೂ ಪೂರ್ಣವಾಗಿ ಹಂಚಿಕೆ ಆಗಿಲ್ಲ.

ಈ ಮಧ್ಯೆ ಕೇಂದ್ರ ಸರ್ಕಾರ ಆಯುಷ್ಮಾನ್‌ ಭಾರತ್ ಯೋಜನೆ ಜಾರಿಗೊಳಿಸಿರುವುದರಿಂದ ಕೇಂದ್ರ ಮತ್ತು ರಾಜ್ಯದ ಯೋಜನೆಗಳನ್ನು ವಿಲೀನಗೊಳಿಸಿ ಜಾರಿಗೆ ತರುವುದರಿಂದ ಸರ್ಕಾರದ ಮೇಲಿನ ಹೊರೆ ಕಡಿಮೆ ಆಗುತ್ತದೆ ಎಂಬುದು ರಾಜ್ಯ ಸರ್ಕಾರದ ಚಿಂತನೆ. ರೈತರ ಸಾಲ ಮನ್ನಾ ಯೋಜನೆಗೆ ಹಣವನ್ನು ಹೊಂದಿಸುವುದೇ ಕಷ್ಟವಾಗಿರುವುದರಿಂದ, ಎಲ್ಲೆಲ್ಲಿ ಸಾಧ್ಯವೊ ಅಲ್ಲಿ ಉಳಿತಾಯ ಮಾಡಲು ಕುಮಾರಸ್ವಾಮಿ ನೇತೃತ್ವದ ಸರ್ಕಾರ ಚಿಂತನೆ ನಡೆಸಿದೆ. 

ವೈದ್ಯರ ಜತೆ ಸಮಾಲೋಚನೆ: ಎರಡೂ ಯೋಜನೆಗಳನ್ನು ವಿಲೀನಗೊಳಿಸುವ ಸಂಬಂಧ ವೈದ್ಯರ ಜೊತೆ ಸಮಾಲೋಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಅಧಿಕಾರಿಗಳ ಸಭೆಯಲ್ಲಿ ತಿಳಿಸಿದ್ದಾರೆ.

ಇವೆರಡೂ ಯೋಜನೆಗಳನ್ನು ಪರಿಶೀಲಿಸಿ ಬಡ ರೋಗಿಗಳಿಗೆ ಅನುಕೂಲ‌ವಾಗುವಂತೆ ಕಾರ್ಯಕ್ರಮ ರೂಪಿಸಬೇಕು ಎಂದು ಅವರು ಸಲಹೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !