ಭಾನುವಾರ, ಆಗಸ್ಟ್ 1, 2021
26 °C

ರೈತ ಗೀತೆ ಕಾಲರ್ ರಿಂಗ್ ಟೋನ್ ಆಗಲಿ: ಬಿ‌.ಸಿ.ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಜೈ ಕಿಸಾನ್' ಎಂದು ಹೆಮ್ಮೆ ವ್ಯಕ್ತಪಡಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲರು ಇದೀಗ 'ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ' ಎನ್ನುವ ರಾಷ್ಟ್ರಕವಿ ಕುವೆಂಪು ವಿರಚಿತ ಪದ್ಯವನ್ನು ಇನ್ನಷ್ಟು ಪ್ರಚುರಪಡಿಸಲು ಮುಂದಾಗಿದ್ದಾರೆ.

ಈ ಹಾಡು ಕರ್ನಾಟಕದಲ್ಲಿ ರೈತಗೀತೆಯೆಂದೇ ಪ್ರಖ್ಯಾತಿ ಹೊಂದಿದ್ದು, ಅನ್ನದಾತನ ಮಹತ್ವವೇನು? ಎನ್ನುವುದನ್ನು ಸಾರಿಸಾರಿ ಹೇಳುತ್ತದೆ. ಅಷ್ಟೇ ಅಲ್ಲ ಕಾರ್ಯಕ್ರಮಗಳಲ್ಲಿ ಈ ಗೀತೆ ಮೊಳಗುತ್ತಿದ್ದಂತೆಯೇ ಎದ್ದುನಿಂತು ಗೌರವವನ್ನೂ ಸೂಚಿಸಲಾಗುತ್ತದೆ.

ಇದೀಗ ಕೃಷಿ ಸಚಿವರು ರೈತರ ಮಹತ್ವವನ್ನು ಸಾರುವ ಈ ಹಾಡನ್ನು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು, ಅಧಿಕಾರಿಗಳು,ಸಿಬ್ಬಂದಿ, ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯೂ ಸೇರಿದಂತೆ ರೈತರು ತಾವು ಬಳಸುವ ಮೊಬೈಲ್‌ನ ಕಾಲರ್ ಟೋನ್,ರಿಂಗ್ ಟೋನ್ ಆಗಿ ಬಳಸುವಂತೆ ಸೂಚನೆ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ 'ಹಲೋ' ಬದಲಿಗೆ 'ಜೈ ಕಿಸಾನ್' ಬಳಸುವಂತೆ ಸಚಿವರು ನಿರ್ದೇಶಿಸಿದ್ದರು.ಇದೀಗ ರೈತಗೀತೆಯನ್ನು ಕಾಲರ್ ರಿಂಗ್ ಟೋನಾಗಿ ಬಳಸಲು ಯೋಜನೆ ರೂಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು