ಸಂಜೆ ಕಾಂಗ್ರೆಸ್‌ನ ಗುಲಾಂ ನಬಿ ಆಜಾದ್, ಬಿ.ಕೆ. ಹರಿಪ್ರಸಾದ್ ಬೆಂಗಳೂರಿಗೆ ಆಗಮನ

ಬೆಂಗಳೂರು: ರಾಜ್ಯ ರಾಜಕಾರಣ ಕ್ಷಣ ಕ್ಷಣಕ್ಕೂ ತಿರುವು ಪಡೆಯುತ್ತಿರುವ ಬೆನ್ನಲೇ ಕಾಂಗ್ರೆಸ್‌ನ ಕೇಂದ್ರ ನಾಯಕರಾದ ಗುಲಾಂ ನಬಿ ಅಜಾದ್ ಮತ್ತು ಬಿ.ಕೆ ಹರಿಪ್ರಸಾದ್ ಬೆಂಗಳೂರಿಗೆ ಬರಲಿದ್ದಾರೆ.
ರಾಜೀನಾಮೆ ನೀಡಿರುವ ರೋಶನ್ ಬೇಗ್ ಹಾಗೂ ರಾಮಲಿಂಗಾ ರೆಡ್ಡಿ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಮಂಗಳವಾರ ರೋಶನ್ ಬೇಗ್ ರಾಜೀನಾಮೆ ನೀಡಿದ್ದರು. ಈ ಇಬ್ಬರು ಶಾಸಕರನ್ನು ಮನವೊಲಿಕೆ ಮಾಡಿ ಮತ್ತೆ ಸರ್ಕಾರವನ್ನು ಸುಭದ್ರಗೊಳಿಸುವ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.
Congress leaders Ghulam Nabi Azad and BK Hariprasad to go to Bengaluru today. #Karnataka (file pics) pic.twitter.com/PlEAR1J7U6
— ANI (@ANI) July 9, 2019
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.