ಯಡಿಯೂರಪ್ಪನವರ ಆತ್ಮಸಾಕ್ಷಿಗೆ ಧನ್ಯವಾದ: ಡಿ.ಕೆ.ಶಿವಕುಮಾರ್‌

7

ಯಡಿಯೂರಪ್ಪನವರ ಆತ್ಮಸಾಕ್ಷಿಗೆ ಧನ್ಯವಾದ: ಡಿ.ಕೆ.ಶಿವಕುಮಾರ್‌

Published:
Updated:

ಬೆಂಗಳೂರು: ‘ಆಪರೇಷನ್‌ ಕಮಲದ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೊ ಬಗ್ಗೆ ಬಿ.ಎಸ್‌.ಯಡಿಯೂರಪ್ಪ ಅವರು ತಪ್ಪೊಪ್ಪಿಕೊಂಡ ಹಿನ್ನೆಲೆ ಅವರ ಆತ್ಮಸಾಕ್ಷಿಗೆ ಧನ್ಯವಾದ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು. 

ಇದನ್ನೂ ಓದಿ... ಹೌದು, ಆಡಿಯೊದಲ್ಲಿರುವ ಧ್ವನಿ ನನ್ನದೇ: ಬಿ.ಎಸ್‌.ಯಡಿಯೂರಪ್ಪ ತಪ್ಪೊಪ್ಪಿಗೆ

‘ವಾಸ್ತವಾಂಶವನ್ನು ಮುಚ್ಚಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಬೇರೆಯಾವರ ಧ್ವನಿಯನ್ನು ಮಿಮಿಕ್ರಿ ಮಾಡುವುದು ಅಷ್ಟು ಸುಲಭವಲ್ಲ’ ಎಂದರು. 

ಇದನ್ನೂ ಓದಿ... ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೊದಲ್ಲಿ ಏನಿದೆ?

‘ಈಗ ರಾಜಕೀಯ ನಿವೃತ್ತಿ ಘೋಷಿಸಲಿ’
‘ಕುಮಾರಸ್ವಾಮಿ ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಹೇಳಿದ್ದ ಯಡಿಯೂರಪ್ಪನವರು ಇದೀಗ ತಪ್ಪೊಪ್ಪಿಕೊಂಡಿದ್ದು, ಹಿನ್ನೆಲೆ ಕೂಡಲೇ ರಾಜಕೀಯದಿಂದ ನಿವೃತ್ತಿ ಘೋಷಿಸಲಿ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಆಗ್ರಹಿಸಿದರು. 

‘ಇದಕ್ಕಿಂತ ಕೀಳುಮಟ್ಟದ ರಾಜಕಾರಣ ಇನ್ನೊಂದಿಲ್ಲ. ಅವರ ವಿರುದ್ಧ ಕ್ರಮ ಜರುಗಿಸುವಂತೆ ಸದನದಲ್ಲಿ ಆಗ್ರಹಿಸುತ್ತೇನೆ’ ಎಂದು ಹೇಳಿದರು. 

ಇವನ್ನೂ ಓದಿ...

ಸಿಎಂ ಕುಮಾರಸ್ವಾಮಿ ಮಾಧ್ಯಮಗೋಷ್ಠಿ; ಬಿಜೆಪಿಯಿಂದ ಶಾಸಕರಿಗೆ ಗಾಳ, ಆಡಿಯೊ ಬಿಡುಗಡೆ

ನಕಲಿ ಆಡಿಯೊ ಕೇಳಿಸಿ ಕಥೆ ಹೇಳ್ತಿದ್ದೀರಿ: ಸಿಎಂಗೆ ಯಡಿಯೂರಪ್ಪ ತಿರುಗೇಟು

ಬರಹ ಇಷ್ಟವಾಯಿತೆ?

 • 14

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !