ಗುರುವಾರ , ಏಪ್ರಿಲ್ 9, 2020
19 °C

ಹುಟ್ಟುಹಬ್ಬದ ದಿನ 'ಕಾವೇರಿ'ಗೆ ಕಾಲಿಟ್ಟ ಮುಖ್ಯಮಂತ್ರಿ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಹುಟ್ಟುಹಬ್ಬದ ದಿನದಂದೇ ಸರ್ಕಾರಿ ನಿವಾಸ ಕಾವೇರಿಗೆ ಪೂಜೆ ಸಲ್ಲಿಸಿ, ಪ್ರವೇಶಿಸಿದರು.

ಇಲ್ಲಿಯವರೆಗೂ ಯಡಿಯೂರಪ್ಪ ಅವರು ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಸ್ವಂತ ಮನೆ ಧವಳಗಿರಿಯಲ್ಲಿದ್ದರು.

ಆರು ವರ್ಷಗಳಿಗೂ ಹೆಚ್ಚು ಅವಧಿವರೆಗೆ ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ ಅವರು ಸರ್ಕಾರಿ ಬಂಗಲೆ ‘ಕಾವೇರಿ’ಯಲ್ಲಿ ನೆಲೆಸಿದ್ದು, ಜನವರಿ 29ರಂದು ಅದನ್ನು ತೊರೆದು, ಕುಮಾರಕೃಪಾ–1ಕ್ಕೆ ತಮ್ಮ ನಿವಾಸ ಬದಲಿಸಿದ್ದರು.

ಮುಖ್ಯಮಂತ್ರಿಯಾಗಿದ್ದಾಗ ‘ಕಾವೇರಿ’ಯನ್ನು ವಾಸ್ತವ್ಯಕ್ಕೆ ಸಿದ್ದರಾಮಯ್ಯ ಅವರು ಹಂಚಿಕೆ ಮಾಡಿಕೊಂಡಿದ್ದರು. 2018ರ ವಿಧಾನಸಭೆ ಚುನಾವಣೆ ಬಳಿಕ ಜೆಡಿಎಸ್‌–ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಅವರು, ಸಚಿವ ಸ್ಥಾನಮಾನ ಸಿಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಕೆಲದಿನ ಅಲ್ಲಿಯೇ ತಮ್ಮ ವಾಸ್ತವ್ಯ ಮುಂದುವರಿಸಿದ್ದರು.

ಮೈತ್ರಿ ಸರ್ಕಾರದ ಅವಧಿಯಲ್ಲಿ ‘ಕಾವೇರಿ’ಯನ್ನು ಬಿಟ್ಟುಕೊಡಬೇಕಾದ ಸಂದರ್ಭ ಎದುರಾದಾಗ ಅಂದು ಸಚಿವರಾಗಿದ್ದ ಕೆ.ಜೆ. ಜಾರ್ಜ್ ಅವರ ಹೆಸರಿಗೆ ಹಂಚಿಕೆ ಮಾಡಿಸಿಕೊಂಡು ಅಲ್ಲಿಯೇ ಉಳಿದುಕೊಂಡಿದ್ದರು.

ಬಿಜೆಪಿ ಸರ್ಕಾರ ಬರುತ್ತಿದ್ದಂತೆ ವಿರೋಧ ಪಕ್ಷದ ನಾಯಕರಾದ ಅವರು, ಅದೇ ನಿವಾಸವನ್ನು ತಮಗೆ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ಇಲ್ಲಿಂದ ಶುರುವಾಗಿದ್ದ ನಿವಾಸದ ಜಟಾಪಟಿ ಕಳೆದ ತಿಂಗಳು ಮುಕ್ತಾಯವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು