ಬುಧವಾರ, ನವೆಂಬರ್ 20, 2019
20 °C

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸೆಕ್ರೆಟರಿಯೆಟ್‌: ಯಡಿಯೂರಪ್ಪ 

Published:
Updated:

ಕಲಬುರ್ಗಿ: ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳ ಅಭಿವೃದ್ಧಿಗೆ ಪ್ರತ್ಯೇಕ ಸೆಕ್ರೆಟರಿಯೆಟ್‌ ರಚಿಸಿ‌ ಹೆಚ್ಚು ಅನುದಾನ ಬಿಡುಗಡೆ ‌ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದರು.

ಕಲ್ಯಾಣ ‌ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ‌ಕರ್ನಾಟಕ ಎಂದು ಹೆಸರು ಬದಲಾಯಿಸಿದ ಮಾತ್ರಕ್ಕೆ ಅಭಿವೃದ್ಧಿಯಾಗದು ಎಂಬುದು ನನ್ನ ಗಮನಕ್ಕಿದೆ. ಅದಕ್ಕಾಗಿ ಪ್ರತ್ಯೇಕ ಸೆಕ್ರೆಟರಿಯೇಟ್ ಮಾಡಲಾಗುವುದು. 

ಇದನ್ನೂ ಓದಿ: ಕಲ್ಯಾಣ ಕರ್ನಾಟಕ: ಹೆಸರಷ್ಟೇ ಸಾಕೆ?

ಈ ವರ್ಷ ಅತಿವೃಷ್ಟಿ ಇರುವುದರಿಂದ ಪರಿಹಾರ ‌ಕಾರ್ಯಕ್ಕೆ ಹೆಚ್ಚು ಹಣ ಬೇಕಾಗುತ್ತದೆ. ಮುಂದಿನ ವರ್ಷದಿಂದ ‌ಕಲ್ಯಾಣ‌ ಕರ್ನಾಟಕ ಭಾಗಕ್ಕೆ ಹೆಚ್ಚು ಹಣ ಬಿಡುಗಡೆ ‌ಮಾಡಲಾಗುವುದು‌‘ ಎಂದು ‌ಭರವಸೆ ನೀಡಿದರು.

 

ಪ್ರತಿಕ್ರಿಯಿಸಿ (+)