ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನಕ್ಕೆ ಜೈಕಾರ ಹಾಕಿದರೆ ಸಹಿಸಲ್ಲ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿಕೆ

Last Updated 16 ಫೆಬ್ರುವರಿ 2020, 14:33 IST
ಅಕ್ಷರ ಗಾತ್ರ

ಚಿತ್ರದುರ್ಗ: ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ನೋಡಿಕೊಂಡು ಸರ್ಕಾರ ಸುಮ್ಮನೆ ಕೂರಲು ಸಾಧ್ಯವಿಲ್ಲ. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಗುಡುಗಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೀದರ್‌ನ ಶಾಹೀನ್‌ ಪ್ರಾಥಮಿಕ ಶಾಲೆಯ ಶಿಕ್ಷಕಿ ಹಾಗೂ ಪೋಷಕಿ ಅಮಾಯಕರಲ್ಲ. ಶಾಲಾ ಮಕ್ಕಳು ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ನೆಪದಲ್ಲಿ ನಡೆಯುತ್ತಿರುವ ಹೋರಾಟ ದೇಶದ್ರೋಹ ಎಸಗುತ್ತಿದೆ’ ಎಂದು ಕಿಡಿಕಾರಿದರು.

‘ಹುಬ್ಬಳ್ಳಿ ಎಂಜಿನಿಯರಿಂಗ್‌ ಕಾಲೇಜು ಯುವಕರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ಖಂಡನೀಯ. ಭಾರತದ ಪ್ರಜೆಗಳಾಗಿ ಪಾಕಿಸ್ತಾನ ಬೆಂಬಲಿಸಿದರೆ ಕೈಕಟ್ಟಿಕೊಂಡು ಸುಮ್ಮನಿರಬೇಕೆ? ಕಾಶ್ಮೀರ ಭಾರತಕ್ಕೆ ಸೇರಿದ್ದು, ಅದನ್ನು ಫ್ರೀ ಕಾಶ್ಮೀರ ಮಾಡಲು ಬಿಡುವುದಿಲ್ಲ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ಮುಖಂಡರು ಇಂತಹ ದೇಶ ವಿರೋಧಿ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಬಿಜೆಪಿ ದ್ವೇಷ, ಸೇಡಿನ ರಾಜಕಾರಣ ಮಾಡಿದ್ದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಹಲವು ನಾಯಕರು ಮನೆಯ ಬದಲು ಎಲ್ಲೋ ಇರುತ್ತಿದ್ದರು. ಆ ಪಕ್ಷಗಳಂತೆ ಸೇಡಿನ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯಲ್ಲಿ ಇಲ್ಲ. ಜೆಡಿಎಸ್‌–ಕಾಂಗ್ರೆಸ್‌ ಸರ್ಕಾರ ಹೇಗೆ ನಡೆದುಕೊಂಡಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತೇವೆ’ ಎಂದು ದೇವೇಗೌಡರ ಕುಟುಂಬದ ಆರೋಪಕ್ಕೆ ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT