ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ

Last Updated 9 ಜುಲೈ 2020, 13:13 IST
ಅಕ್ಷರ ಗಾತ್ರ

ಮಡಿಕೇರಿ: ಕೊರೊನಾ ಸೋಂಕು ಕಾಣಿಸಿಕೊಂಡು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಗೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಹಿಳಾ ಮತ್ತು ಮಕ್ಕಳ ಹಾಗೂ ಅರಿವಳಿಕೆ ವಿಭಾಗದ ತಜ್ಞ ವೈದ್ಯರು, ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದಾರೆ.

ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕೋವಿಡ್‌ ಸಂದರ್ಭದಲ್ಲಿಯೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ತಜ್ಞ ವೈದ್ಯರು ಸೋಂಕಿತ ಗರ್ಭಿಣಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ ಮತ್ತು ಮಗುವಿನ ಆರೈಕೆ ಬಗ್ಗೆವೈದ್ಯರು ಹೆಚ್ಚಿನ ನಿಗಾ ವಹಿಸಿದ್ದಾರೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT