‘ಬಡವರ ಬಂಧು’ ಯೋಜನೆ ಜಾರಿಗೆ ಸಿದ್ಧತೆ

7
ಬೀದಿಬದಿ ವ್ಯಾಪಾರಿಗಳಿಗೆ ದುಡಿಮೆ ಬಂಡವಾಳ

‘ಬಡವರ ಬಂಧು’ ಯೋಜನೆ ಜಾರಿಗೆ ಸಿದ್ಧತೆ

Published:
Updated:
Deccan Herald

ಬೆಂಗಳೂರು: ಸಣ್ಣ ವ್ಯಾಪಾರಿಗಳು ಮತ್ತು ಬೀದಿಬದಿ ವ್ಯಾಪಾರಿಗಳಿಗೆ ನೆರವಾಗಲು ರಾಜ್ಯ ಸರ್ಕಾರ ‘ಬಡವರ ಬಂಧು’ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಈ ಸಂಬಂಧ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಅವರು ಯಶವಂತಪುರದ ಹಣ್ಣು ಮತ್ತು ತರಕಾರಿ ಮಾರುಕಟ್ಟೆಗೆ ಮಂಗಳವಾರ ಬೆಳಿಗ್ಗೆ ಭೇಟಿ ನೀಡಿ ವ್ಯಾಪಾರಿಗಳೊಂದಿಗೆ ಚರ್ಚಿಸಿದರು.

ಪ್ರಸಕ್ತ ಲೇವಾದೇವಿದಾರರಿಂದ ಬೆಳಿಗ್ಗೆ ಹಣ ಪಡೆದು ಸಂಜೆ ಪಾವತಿಸುತ್ತಿರುವ ಸಣ್ಣ ವ್ಯಾಪಾರಸ್ಥರು, ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರದಿಂದಲೇ ನಿತ್ಯ ದುಡಿಮೆ ಬಂಡವಾಳ ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಮೀಟರ್‌ ಬಡ್ಡಿ ದಂಧೆಗೆ ಸಿಲುಕಿ ಸಂತ್ರಸ್ತರಾಗಿರುವ ಕೆಳವರ್ಗದ ಜನರಿಗೆ ರಕ್ಷಣೆ ನೀಡುವುದು ಈ ಯೋಜನೆಯ ಉದ್ದೇಶ.

‘ಬಡವರ ಬಂಧು ಯೋಜನೆ ಜಾರಿಗೆ ಸಿದ್ಧತೆ ನಡೆಸಿದ್ದೇವೆ. ಈಗಾಗಲೇ ಯೋಜನೆಗೆ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಬೀದಿಬದಿಯ ವ್ಯಾಪಾರಿಗಳ ಸಮಸ್ಯೆಗಳನ್ನು ತಿಳಿಯಲು ಈ‌ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಡವರಿಗೆ ಅನುಕೂಲವಾಗುವಂತೆ ಯೋಜನೆ ರೂಪಿಸುತ್ತಿದ್ದೇವೆ’ ಎಂದು ಕಾಶೆಂಪೂರ ತಿಳಿಸಿದರು.

‘ಖಾಸಗಿಯವರು ವ್ಯಾಪಾರಿಗಳಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುವುದಕ್ಕೆ ಈ ಮೂಲಕ ಕಡಿವಾಣ ಹಾಕುವ ಉದ್ದೇಶ ಸರ್ಕಾರಕ್ಕಿದೆ’ ಎಂದರು.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !