ಗುರುವಾರ , ಆಗಸ್ಟ್ 5, 2021
23 °C
ಬಂಡಿಗಣಿ: ನೀರಿನಲ್ಲಿ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿದ ಮಹಿಳೆ

ಬಾಗಲಕೋಟೆ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಮಕ್ಕಳು ಸಾವು, ತಾಯಿ ಸ್ಥಿತಿ ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಪತಿಯ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗದೇ ನೊಂದುಕೊಂಡು ಮಹಿಳೆಯೊಬ್ಬರು ರಬಕವಿ–ಬನಹಟ್ಟಿ ತಾಲ್ಲೂಕಿನ ಬಂಡಿಗಣಿ ಅರಣ್ಯಪ್ರದೇಶದಲ್ಲಿ ಶನಿವಾರ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮಕ್ಕಳು ಸಾವಿಗೀಡಾಗಿದ್ದು, ತಾಯಿಯ ಸ್ಥಿತಿ ಗಂಭೀರವಾಗಿದೆ.

ಬಂಡಿಗಣಿ ಗ್ರಾಮದ ಭಾಗ್ಯಶ್ರೀ ಮಠದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. 12 ವರ್ಷದ ಶಿವಾನಿ, 10 ವರ್ಷದ ಶಿವಶಂಕರ ಹಾಗೂ 9 ವರ್ಷದ ಶಿವಸ್ತೀ ಮೃತಪಟ್ಟ ಮಕ್ಕಳು. ಬಂಡಿಗಣಿ ಸಮೀಪದ ಅರಣ್ಯಪ್ರದೇಶದಲ್ಲಿ ದೇವರ ದರ್ಶನಕ್ಕೆಂದು ಮಕ್ಕಳನ್ನು ಕರೆದೊಯ್ದಿದ್ದ ಭಾಗ್ಯಶ್ರೀ, ಕುಡಿಯುವ ನೀರಿನಲ್ಲಿ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿದ್ದಾರೆ. ನಂತರ ತಾವು ಕುಡಿದಿದ್ದಾರೆ. ಅವರ ಆರೋಗ್ಯಸ್ಥಿತಿ ಗಂಭೀರವಾಗಿದೆ. ಮಹಾಲಿಂಗಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಭಾಗ್ಯಶ್ರೀ ಅವರ ಪತಿ ಚಿಕ್ಕಯ್ಯ ಮಠದ ಅವರನ್ನು ಎರಡು ವರ್ಷಗಳ ಹಿಂದೆ ವಾಹನದಿಂದ ಹೊರಗೆಳೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಚಿಕ್ಕಯ್ಯನ ತಂದೆ, ಬಂಡಿಗಣಿ ಮಠದ ಚಕ್ರವರ್ತಿ ದಾನೇಶ್ವರ ಸ್ವಾಮಿಯ ಹೆಸರು ಕೇಳಿಬಂದಿತ್ತು. ನಂತರ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು