ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಗರ್‌ಹುಕುಂ: ನಿಯಮ 108ಕ್ಕೆ ತಿದ್ದುಪಡಿಗೆ ಚಿಂತನೆ

Last Updated 9 ಜುಲೈ 2018, 19:52 IST
ಅಕ್ಷರ ಗಾತ್ರ

ಬೆಂಗಳೂರು: ಬಗರ್‌ಹುಕುಂ ಸಾಗುವಳಿದಾರರಿಗೆ ಅನುಕೂಲ ಕಲ್ಪಿಸುವ ಸಲುವಾಗಿ 1966ರ ಕರ್ನಾಟಕ ಭೂಕಂದಾಯ ಕಾಯ್ದೆಯ ನಿಯಮ 108ಕ್ಕೆ ಮತ್ತೊಮ್ಮೆ ತಿದ್ದುಪಡಿ ತರುವ ಚಿಂತನೆ ಇದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ವಿಧಾನಸಭೆಯಲ್ಲಿ ತಿಳಿಸಿದರು.

ಶೃಂಗೇರಿಯ ಶಾಸಕ ಟಿ.ಡಿ.ರಾಜೇಗೌಡ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ‘ಈ ಹಿಂದೆ 1964ರ ಭೂಕಂದಾಯ ಕಾಯ್ದೆಯ ಕಲಂ 94 ಎಗೆ ತಿದ್ದುಪಡಿ ತರಲಾಗಿತ್ತು. ಬಗರ್‌ಹುಕುಂ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು 2005ರ ಜನವರಿ 1ರ ಗಡುವು ನಿಗದಿಪಡಿಸಲಾಗಿತ್ತು. ಈಗ 1966ರ ಭೂಕಂದಾಯ ನಿಯಮಕ್ಕೆ 108ಸಿಸಿಸಿ ಸೇರ್ಪಡೆಗೊಳಿಸಿ ಅರ್ಜಿ ನಮೂನೆ 57 ಜಾರಿಗೆ ತರುವ ಸಲುವಾಗಿ ಕಾಯ್ದೆಗೆ ತಿದ್ದುಪಡಿ ತರುವ ಪ್ರಕ್ರಿಯೆ ಜಾರಿಯಲ್ಲಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT