ಭಾನುವಾರ, ಜನವರಿ 26, 2020
20 °C

ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಜಾಮೀನು ನಿರಾಕರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 17ನೇ ಆರೋಪಿ ಕೆ.ಟಿ. ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಈ ಕುರಿತ ತೀರ್ಪನ್ನು ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು, ಶುಕ್ರವಾರ ಕಲಬುರ್ಗಿ ಪೀಠದಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಕಟಿಸಿದರು.

‘ನವೀನ್ ಕುಮಾರ್, ಪ್ರೊ.ಭಗವಾನ್ ಅವರನ್ನೂ ಹತ್ಯೆ ಮಾಡಲು ಪಿತೂರಿ ನಡೆಸಿದ್ದರು. ಇದಕ್ಕೆ ಅಗತ್ಯ ಸಾಕ್ಷ್ಯಾಧಾರಗಳಿವೆ. ಅಂತೆಯೇ ಅರ್ಜಿದಾರರ ವಿರುದ್ಧ ಈಗಾಗಲೇ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದ್ದರಿಂದ ಜಾಮೀನು ನೀಡಬಾರದು’ ಎಂಬ ಪ್ರಾಸಿಕ್ಯೂಟರ್‌ ವಾದವನ್ನು ನ್ಯಾಯಪೀಠ ಪುರಸ್ಕರಿಸಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು