ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಡಿಯೊ ಪ್ರಕರಣ: ಯಡಿಯೂರಪ್ಪಗೆ ಜಾಮೀನು

Last Updated 16 ಫೆಬ್ರುವರಿ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ‘ಆಪರೇಷನ್ ಕಮಲ’ ಆಡಿಯೊ ಪ್ರಕರಣದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ನಾಲ್ವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಜತೆಗೆ, ಶಾಸಕರಾದ ಕೆ.ಶಿವನಗೌಡ ನಾಯಕ, ಪ್ರೀತಂಗೌಡ ಹಾಗೂ ಪತ್ರಕರ್ತ ಎಂ.ಬಿ.ಮರಮಕಲ್ ಅವರಿಗೂ ಜಾಮೀನು ಸಿಕ್ಕಿದೆ.

‘ವೈಯಕ್ತಿಕ ₹1 ಲಕ್ಷ ಬಾಂಡ್ ನೀಡಬೇಕು. ಸಾಕ್ಷಿ ನಾಶ ಮಾಡಬಾರದು. ತನಿಖೆಗೆ ಸಹಕರಿಸಬೇಕು’ ಎಂಬ ಷರತ್ತುಗಳನ್ನು ಜಾಮೀನಿಗೆ ವಿಧಿಸಲಾಗಿದೆ.

‘ನನ್ನ ತಂದೆ ನಾಗನಗೌಡ ಅವರಿಂದ ರಾಜೀನಾಮೆ ಕೊಡಿಸುವುದಕ್ಕಾಗಿ ಯಡಿಯೂರಪ್ಪ, ಶಿವನಗೌಡ ನಾಯಕ, ಪ್ರೀತಂಗೌಡ ಹಾಗೂ ಮರಮಕಲ್ ಅವರು ₹10 ಕೋಟಿ ಆಮಿಷವೊಡ್ಡಿದ್ದರು’ ಎಂದು ಗುರುಮಠಕಲ್ ಶಾಸಕ ನಾಗನಗೌಡ ಅವರ ಪುತ್ರ ಶರಣಗೌಡ ದೇವದುರ್ಗ ಠಾಣೆಗೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT