ಮಂಗಳವಾರ, ಮೇ 26, 2020
27 °C

ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹುಬ್ಬಳ್ಳಿ: ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದ ಇಲ್ಲಿನ ಮೂವರು ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಪಾಕ್ ಪರವಾಗಿ ಘೋಷಣೆ ಕೂಗಿದ ಆರೋಪದ ಮೇಲೆ ಕಾಶ್ಮಿರದ ಬಾರಮುಲ್ಲಾದ ಅಮೀರ್‌ ವಾನಿ, ತಾಲೀಬ್‌ ಮಜೀದ್‌ ಮತ್ತು ಬಾಸಿತ್‌ ಸೋಫಿ ವಿರುದ್ಧ ಜಾಮೀನು ರಹಿತ ಐಪಿಸಿ 153ಎ (ಬಿ), 153ಬಿ (ಸಿ) ಮತ್ತು 505 (2) ಪ್ರಕರಣ ದಾಖಲಿಸಿ, ಕೋಮು ಸೌಹಾರ್ದ ಕದಡುವ ಹಾಗೂ ದೇಶದ್ರೋಹದ ಆರೋಪದಡಿ ಬಂಧಿಸಲಾಗಿತ್ತು. ಆದರೆ ಸಾಕ್ಷ್ಯಾಧಾರದ ಕೊರತೆ ಹಿನ್ನೆಲೆಯಲ್ಲಿ ಸಿ.ಆರ್.ಪಿ.ಸಿ 169 ಕಾಯ್ದೆ ಅಡಿಯಲ್ಲಿ ಆರೋಪಿಗಳಿಂದ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಲಾಗಿತ್ತು. 

ಇದನ್ನೂ ಓದಿ: 

ಇದರಿಂದ ಆಕ್ರೋಶಗೊಂಡ ಬಜರಂಗದಳ, ವಿಶ್ವಹಿಂದೂ ಪರಿಷತ್ ಮತ್ತು ಬಿಜೆಪಿ ಮುಖಂಡರು ಭಾನುವಾರ ಸಂಜೆ ಪ್ರತಿಭಟನೆ ನಡೆಸಿದ್ದರು. ರಾಜಕೀಯ ಮುಖಂಡರು ಸಹ ಪೊಲೀಸ್ ಇಲಾಖೆ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರಿಂದ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಮೂವರನ್ನು ಮತ್ತೆ ಬಂಧಿಸಿ ಕೋರ್ಟ್ಗೆ ಹಾಜರು ಪಡಿಸಿತ್ತು.

ನ್ಯಾಯಾಧೀಶರು ನ್ಯಾಯಾಂಗ ವಶಕ್ಕೆ ನೀಡಿದ ನಂತರ ಆರೋಪಿಗಳನ್ನು ಕರೆದೊಯ್ಯವಾಗ ಬಜರಂಗದಳ ಕಾರ್ಯಕರ್ತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ತಡೆಯಲು ಮುಂದಾದಾಗ ವಾಗ್ವಾದ ನಡೆದು ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಪೊಲೀಸ್ ವ್ಯಾನ್ ತಡೆದು ಪ್ರತಿಭಟನೆ ನಡೆಸಿದರು. ನಂತರ ಭದ್ರತೆಯಲ್ಲಿ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು