ಮಂಗಳವಾರ, ಜೂನ್ 22, 2021
28 °C

ಅವಿರೋಧ ಆಯ್ಕೆಯಾಗುವ ವಿಶ್ವಾಸವಿದೆ: ಬಾಲಚಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಕಾಕ (ಬೆಳಗಾವಿ ಜಿಲ್ಲೆ): ‘ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ಅಧ್ಯಕ್ಷನಾಗಿ ನಾನು ಅವಿರೋಧ ಆಯ್ಕೆಯಾಗುವ ವಿಶ್ವಾಸವಿದೆ’ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಆ. 31ರಂದು ಚುನಾವಣೆ ನಡೆಯಲಿದೆ. ‌ನಾನೂ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೂ ಚರ್ಚಿಸಿದ್ದೇನೆ. 16 ಮಂದಿ ನಿರ್ದೇಶಕರ ಪೈಕಿ 12 ಮಂದಿ ನನ್ನ ಬೆಂಬಲಕ್ಕಿದ್ದಾರೆ. ಅವಿರೋಧ ಆಯ್ಕೆಯಾಗದಿದ್ದಲ್ಲಿ ಚುನಾವಣೆ ಎದುರಿಸುತ್ತೇನೆ’ ಎಂದು ಸ್ಪಷ್ಟಪಡಿಸಿದರು.

‘ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಕೊಡಿಸಲು ಹೋರಾಡುತ್ತೇನೆ. ಅವರ ಬೆಂಬಲಕ್ಕೆ ನಾವೆಲ್ಲರೂ ಇದ್ದೇವೆ. ಶಾಸಕರಿದ್ದವರಿಗೆ ಸಚಿವ ಸ್ಥಾನ ನೀಡಿದರೆ ಒಳ್ಳೆಯದು’ ಎಂದರು.

‘ನಾಯಕರಿಗೆ ಮಾತ್ರ ಮಧ್ಯಂತರ ಚುನಾವಣೆ ಬೇಕಾಗಿದೆಯೇ ಹೊರತು, ಶಾಸಕರಿಗಲ್ಲ. ಮಧ್ಯಂತರ ಚುನಾವಣೆ ನಡೆಯುವುದಿಲ್ಲ. ಬಿಜೆಪಿ ಸರ್ಕಾರಕ್ಕೆ ತೊಂದರೆ ಇಲ್ಲ’ ಎಂದು ಪ್ರತಿಕ್ರಿಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು