ಬುಧವಾರ, ನವೆಂಬರ್ 20, 2019
22 °C

ಬಲಿಜ ಜನಾಂಗಕ್ಕೆ ಉದ್ಯೋಗದಲ್ಲಿ ಮೀಸಲಾತಿ ಪರಿಶೀಲನೆ: ಮುಖ್ಯಮಂತ್ರಿ ಭರವಸೆ

Published:
Updated:

ಚಿಕ್ಕಬಳ್ಳಾಪುರ: 'ಬಲಿಜ ಜನಾಂಗಕ್ಕೆ 2ಎ ಪ್ರವರ್ಗದಡಿ ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಚರ್ಚಿಸಿ, ಕ್ರಮಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಇದನ್ನೂ ಓದಿ: ಬಲಿಜ ಜನಾಂಗ; ಮೀಸಲಾತಿಗೆ ಒತ್ತಾಯ

'ಈ ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಬಜಿಜ ಸಮುದಾಯಕ್ಕೆ 2ಎ ಪ್ರವರ್ಗದಡಿ ತಂದು ಶಿಕ್ಷಣದಲ್ಲಿ ಮೀಸಲಾತಿ‌ ಕಲ್ಪಿಸಿದ್ದೆ.

ಈಗ ಅದನ್ನು ಉದ್ಯೋಗಕ್ಕೂ ವಿಸ್ತರಿಸಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಚರ್ಚಿಸಿ ಕ್ರಮಕೈಗೊಳ್ಳುವೆ' ಎಂದು ಭರವಸೆ ನೀಡಿದರು.

ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ವಸತಿ ಸಚಿವ ವಿ.ಸೋಮಣ್ಣ, ಸಂಸದರಾದ ಪಿ.ಸಿ.ಮೋಹನ್, ಎನ್.ಮುನಿಸ್ವಾಮಿ, ಅನರ್ಹ ಶಾಸಕ ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)