ಗುರುವಾರ , ಡಿಸೆಂಬರ್ 12, 2019
26 °C

15 ವರ್ಷ ಮೀರಿದ ಬಸ್‌ಗಳಿಗೆ ನಿಷೇಧ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ 15 ವರ್ಷಗಳಿಗೂ ಹೆಚ್ಚು ಹಳೆಯದಾದ 21 ಸಾವಿರ ಬಸ್‌ಗಳ ಸಂಚಾರವನ್ನು ನಿಷೇಧಿಸುವಂತೆ ಕೋರಿ ಸಾರಿಗೆ ಪ್ರಾಧಿಕಾರವು ಸರ್ಕಾರಕ್ಕೆ ಪತ್ರ ಬರೆದಿದೆ. 

ಮಂಡ್ಯದ ಕನಗನಮರಡಿಯಲ್ಲಿ ಕಾಲುವೆಗೆ ಬಸ್‌ ಉರುಳಿ 30 ಜನ ಸಾವಿಗೀಡಾದ ದುರಂತದ ಹಿನ್ನೆಲೆಯಲ್ಲಿ ಪ್ರಾಧಿಕಾರವು ಈ ಪ್ರಸ್ತಾವ ಸಿದ್ಧಪಡಿಸಿದೆ. ಆ ಬಸ್‌ 18 ವರ್ಷಗಳಷ್ಟು ಹಳೆಯದಾಗಿತ್ತು. 

‘ದುರಂತದ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಪ್ರಯಾಣಿಕರ ಸುರಕ್ಷೆಯ ದೃಷ್ಟಿಯಿಂದ ಈ ಪ್ರಸ್ತಾವ ಸಲ್ಲಿಸಲಾಗಿದೆ. ಸರ್ಕಾರ ಈ ಬಗ್ಗೆ ನಿರ್ಧರಿಸಬೇಕಿದೆ’ ಎಂದು ಸಾರಿಗೆ ಇಲಾಖೆ ಆಯುಕ್ತ ವಿ.ಪಿ. ಇಕ್ಕೇರಿ ಹೇಳಿದರು.

ಪ್ರತಿಕ್ರಿಯಿಸಿ (+)