ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು– ಬೆಂಗಳೂರು ಮಧ್ಯೆ ವಂದೇಭಾರತ ಎಕ್ಸ್‌ಪ್ರೆಸ್‌

Last Updated 22 ಫೆಬ್ರುವರಿ 2019, 20:14 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳೂರು– ಬೆಂಗಳೂರು, ಬೆಂಗಳೂರು– ಹೈದರಾಬಾದ್‌, ಬೆಂಗಳೂರು – ಚೆನ್ನೈ ನಡುವೆ ವಂದೇ ಭಾರತ ಎಕ್ಸ್‌ಪ್ರೆಸ್‌ ರೈಲು ಓಡಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಪೀಯೂಷ್‌ ಗೋಯಲ್‌ ಹೇಳಿದರು.

ವಂದೇ ಭಾರತ (ಟ್ರೈನ್‌ –18) ಸಂಪೂರ್ಣ ಸ್ವದೇಶಿ ತಂತ್ರಜ್ಞಾನವನ್ನು ಹೊಂದಿದ ಅತ್ಯಾಧುನಿಕ ರೈಲು. ಹೀಗಾಗಿ ಇದನ್ನು ಪ್ರಮುಖ ನಗರಗಳ ನಡುವೆ ಸಂಪರ್ಕ ಕೊಂಡಿಯಾಗಿ ಬೆಸೆಯಲಿದ್ದೇವೆ. ಈ ಮಾರ್ಗದುದ್ದಕ್ಕೂ ಜಾಗತಿಕ ಗುಣಮಟ್ಟದ ಸ್ವದೇಶಿ ನಿರ್ಮಿತ ಸ್ವಯಂ ಚಾಲಿತ ಸಿಗ್ನಲ್‌ ವ್ಯವಸ್ಥೆಯೂ ಇರಲಿದೆ ಎಂದರು.

ಇನ್ನು 6 ತಿಂಗಳಲ್ಲಿ ದೇಶದ ಎಲ್ಲ ರೈಲು ನಿಲ್ದಾಣಗಳಲ್ಲಿ ಉಚಿತ ವೈ–ಫೈ ಸೌಲಭ್ಯ ಅಳವಡಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಸದ್ಯ ದೆಹಲಿ ಮತ್ತು ವಾರಾಣಸಿ ಮಧ್ಯೆ ಓಡುತ್ತಿರುವ ಈ ರೈಲನ್ನು ದೇಶದಾದ್ಯಂತ ವಿಸ್ತರಿಸುವ ಯೋಜನೆಯೂ ಇದೆ. ಗಂಟೆಗೆ 180ರಿಂದ 200 ಕಿಲೋಮೀಟರ್‌ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಈ ರೈಲಿನದ್ದು. ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆ ಇದೆ. ಆರಾಮದಾಯಕ ಸೌಲಭ್ಯಗಳು ಸ್ವಯಂ ಚಾಲಿತ ವಾತಾನುಕೂಲ, ಸಂವಹನ ವ್ಯವಸ್ಥೆಯಿದೆ. ಫೆ. 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ರೈಲನ್ನು ಉದ್ಘಾಟಿಸಿದ್ದರು.

ಶತಾಬ್ದಿ ಎಕ್ಸ್‌ಪ್ರೆಸ್‌ಗೆ ಪರ್ಯಾಯವಾಗಿ ಈ ರೈಲುಗಳನ್ನು ಓಡಿಸುವ ಚಿಂತನೆಯೂ ಇದೆ. ಅದಕ್ಕೆ ತಕ್ಕಂತೆ ಹಳಿಗಳ ಸಾಮರ್ಥ್ಯ, ಸುರಕ್ಷತಾ ವ್ಯವಸ್ಥೆಯನ್ನೂ ಅಳವಡಿಸಿಕೊಳ್ಳಬೇಕು. ಮಾರ್ಗ ಸಂಪೂರ್ಣ ವಿದ್ಯುದೀಕರಣಗೊಳ್ಳಬೇಕು. ಕಾರ್ಯಸಾಧ್ಯತೆಯ ಬಗ್ಗೆ ಅಧ್ಯಯನ ನಡೆಸಿದ ಬಳಿಕ ಈ ಯೋಜನೆ ಕಾರ್ಯಗತವಾಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT