ಸೋಮವಾರ, ಜನವರಿ 20, 2020
26 °C

ಪ್ರಧಾನಿ ರೈತರ ಆದಾಯ ದ್ವಿಗುಣಗೊಳಿಸುವ ಗುರಿ ನೀಡಿದ್ದಾರೆ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ‘ಈ ವರ್ಷದ ವಿಜ್ಞಾನ ಸಮಾವೇಶದ ಆಶಯದಂತೆ ಗ್ರಾಮೀಣ ಅಭಿವೃದ್ಧಿಗೆ ವೈಜ್ಞಾನಿಕ ಸಂಶೋಧನೆಗಳ ಫಲ ತಲುಪಿಸಲು ನಾವು ಪ್ರಯತ್ನಿಸುತ್ತಿದ್ದೇವೆ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಇಲ್ಲಿನ ಜಿಕೆವಿಕೆ ಆವರಣದಲ್ಲಿ ನಡೆಯುತ್ತಿರುವ ಕೃಷಿ ವಿಜ್ಞಾನ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

'ಇಂಥ ದೊಡ್ಡ ಕಾರ್ಯಕ್ರಮವನ್ನು ನಡೆಸಲು ಅವಕಾಶ ಸಿಕ್ಕಿದ್ದು ನಮ್ಮ ರಾಜ್ಯಕ್ಕೆ ಸಿಕ್ಕ ಗೌರವ ಎಂದೇ ಭಾವಿಸುತ್ತೇನೆ. ರೈತರ ಆದಾಯ ದ್ವಿಗುಣಗೊಳಿಸುವ ಗುರಿಯನ್ನು ನಮ್ಮ ಪ್ರಧಾನಿ ನೀಡಿದ್ದಾರೆ. ಕೃಷಿ ಉತ್ಪನ್ನಗಳ ಮೌಲ್ಯವರ್ಧನಗೆ ರಾಜ್ಯ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ಒದಗಿಸುತ್ತಿದೆ’ ಎಂದರು.

‘ಈ ಸಮಾವೇಶದ ಫಲಶ್ರುತಿಯನ್ನು ರಾಜ್ಯ ಸರ್ಕಾರವೂ ಕುತೂಹಲದಿಂದ ಗಮನಿಸುತ್ತಿದೆ. ವಿಜ್ಞಾನಿಗಳ ಚಿಂತನೆಗಳನ್ನು ತನ್ನ ನೀತಿಗಳಲ್ಲಿ ಅಳವಡಿಸಿಕೊಳ್ಳಲು ಬದ್ದವಾಗಿದೆ’ ಎಂದು ಹೇಳಿದರು.    

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು