ಭಾನುವಾರ, ಜೂಲೈ 5, 2020
22 °C

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಆಪ್ತ ಸಹಚರನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿಯ ಆಪ್ತ ಸಹಚರ ಗುಲಾಂ ಎಂಬಾತನನ್ನು ಕೇಂದ್ರ ಅಪರಾಧ ದಳದ ಪೊಲೀಸರು ಮಂಗಳೂರಿನಿಂದ ಬಂಧಿಸಿದ್ದಾರೆ.

ಪೊಲೀಸರ ವಶದಲ್ಲಿರುವ ಪೂಜಾರಿ ವಿಚಾರಣೆ ಮುಂದುವರಿದಿದ್ದು, ಆತ ನೀಡಿದ ಮಾಹಿತಿ ಆಧರಿಸಿ ಗುಲಾಂನನ್ನು ಬಂಧಿಸಲಾಗಿದೆ.

ಸುಲಿಗೆ ಸೇರಿದಂತೆ ಪೂಜಾರಿ ನಡೆಸುತ್ತಿದ್ದ ಅಪರಾಧ ಚಟುವಟಿಕೆಗೆ ಗುಲಾಂ ಸಹಾಯ ಮಾಡುತ್ತಿದ್ದ. ಆತನನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದು, 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಗುಲಾಂನ ವಿಚಾರಣೆಯಿಂದ ಪೂಜಾರಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿ ಸಿಗುವ ನಿರೀಕ್ಷೆ ಇದೆ ಎಂದೂ ಸಿಸಿಬಿ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು