ಮಂಗಳವಾರ, ಆಗಸ್ಟ್ 20, 2019
25 °C

ನೆಹರೂ ಮನೆತನದ ನಾಯಿ,ಬೆಕ್ಕುಗಳಿಗೂ ಘಾಟ್‌ಗಳಿವೆ: ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ

Published:
Updated:

ಕಲಬುರ್ಗಿ: ‘ನೆಹರೂ ಮನೆತನದಲ್ಲಿ ನಾಯಿ, ಬೆಕ್ಕುಗಳಿಗೂ ಘಾಟ್‌ಗಳಿವೆ. ಆದರೆ, ಡಾ. ಬಿ.ಆರ್.ಅಂಬೇಡ್ಕರ್ ಅವರ ಅಂತ್ಯಸಂಸ್ಕಾರಕ್ಕೆ ಜಾಗ ಇರಲಿಲ್ಲ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದಾರೆ. ಈಗ ಅಂಬೇಡ್ಕರ್ ಹೆಸರು ಹೇಳಿಕೊಂಡು ರಾಜಕೀಯ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

‘ಸಂವಿಧಾನ ಬದಲಾವಣೆ ಬಗ್ಗೆ ನಾನು ಎಲ್ಲಿಯೂ ಹೇಳಿಕೆ ನೀಡಿಲ್ಲ. ಆದರೆ, ಸಮಾನ ನಾಗರಿಕ ಸಂಹಿತೆ ಕಾಯ್ದೆ ಜಾರಿಗೆ ಬರಬೇಕು ಎಂದು ಹೇಳಿದ್ದೇನೆ. ಸಂವಿಧಾನ ಬದಲಾವಣೆ ಬಗ್ಗೆ ನಾನು ಮಾತನಾಡಿದ್ದೇನೆ ಎನ್ನುವುದನ್ನು ಸಾಕ್ಷಿ ಸಮೇತ ತೋರಿಸಿದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ’ ಎಂದು ಸವಾಲು ಹಾಕಿದರು.

‘ಪ್ರಧಾನಿ ನರೇಂದ್ರ ಮೋದಿ ನೇಣಿಗೇರಲು ಸಿದ್ಧವಾದರೆ ನಾವು ರಸ್ತೆ ಸಿದ್ಧಪಡಿಸಿ ಕೊಡುತ್ತೇವೆ’ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಶ್ರೀಮಂತಿಕೆ, ಯೌವ್ವನ ಮತ್ತು ಅಧಿಕಾರ ಒಟ್ಟಿಗೆ ಬಂದಾಗ ಈ ರೀತಿ ಅಹಂಕಾರ ಬರುತ್ತದೆ. ಪ್ರಿಯಾಂಕ್ ಖರ್ಗೆಗೆ ಈ ಮೂರೂ ಒಟ್ಟಿಗೆ ಬಂದಿವೆ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ’ ಎಂದು ಜರಿದರು.

Post Comments (+)