ಗುರುವಾರ , ಏಪ್ರಿಲ್ 2, 2020
19 °C

ಯತ್ನಾಳ ಶಾಸಕತ್ವ ರದ್ದು ಮಾಡಲಿ: ಈಶ್ವರ ಖಂಡ್ರೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ‘ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್. ದೊರೆಸ್ವಾಮಿ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಳ ಯತ್ನಾಳ್ ಅವರ ಶಾಸಕ ಸ್ಥಾನವನ್ನು ರದ್ದು ಮಾಡಬೇಕು’ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯಿಸಿದರು.

ಹುಬ್ಬಳ್ಳಿಯ ಭಾನುವಾರ ಮಾತನಾಡಿದ ಅವರು, ‘ನಿರುದ್ಯೋಗಿಯಾಗಿರುವ ಯತ್ನಾಳ ಅವರಿಗೆ ಮಾನ ಮರ್ಯಾದೆ ಇಲ್ಲ. ಸ್ವಾರ್ಥಕ್ಕಾಗಿ ಹುಚ್ಚುಚ್ಚಾಗಿ ಹೇಳಿಕೆ ನೀಡುತ್ತಿದ್ದಾರೆ. ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯವು ದೊರೆಸ್ವಾಮಿ ಅವರಂತಹ ಹೋರಾಟಗಾರರ ಫಲವಾಗಿದೆ ಎಂಬುದನ್ನು ಅರಿತುಕೊಳ್ಳಬೇಕು’ ಎಂದರು.

ವಿರೋಧ ಇಲ್ಲ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನಕ್ಕೆ ಸಿದ್ದರಾಮಯ್ಯ ಅವರು ಹೋಗಿ ಬಂದಿದ್ದಕ್ಕೆ ಕಾಂಗ್ರೆಸ್‌ನೊಳಗೆ ಯಾವುದೇ ಅಸಮಾಧಾನವಿಲ್ಲ. ರಾಜಕೀಯ ಬೇರೆ, ಮನುಷ್ಯ ಸಂಬಂಧಗಳು ಬೇರೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಹಾಗಾಗಿ, ಇದರ ಬಗ್ಗೆ ಯಾರಿಂದಲೂ ಅಪಸ್ವರವಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆಗೆ ಸಂಬಂಧಿಸಿದಂತೆ, ಪಕ್ಷದ ವೀಕ್ಷಕರು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಹಾಗಾಗಿ, ಯಾವ ಕ್ಷಣದಲ್ಲಿ ಬೇಕಾದರೂ ಅಧ್ಯಕ್ಷರ ಆಯ್ಕೆ ನಡೆಯಬಹುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು